ಕಲಬುರಗಿಯ ನೂತನ ವಿದ್ಯಾಲಯ (ಎನ್ವಿ) ಮೈದಾನದಲ್ಲಿ ಇಂಧನ ಇಲಾಖೆ ಹಾಗೂ ಜೆಸ್ಕಾಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೃಹಜ್ಯೋತಿ ಯೋಜನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ (ಆಗಸ್ಟ್ 5) ಚಾಲನೆ ನೀಡಿದರು.
ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಖಾತ್ರಿ ಯೋಜನೆಗಳ ಪೈಕಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತವಾಗಿ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯ ಉದ್ಘಾಟನೆಗಾಗಿ ವೇದಿಕೆಯ ಮೇಲೆ ನಿರ್ಮಿಸಲಾದ ಮಾದರಿ ಮನೆಯ ವಿದ್ಯುತ್ ದೀಪ ಬೆಳಗಿಸುವ ಮೂಲಕ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ ಯೋಜನೆಯ ಲೋಕಾರ್ಪಣೆ ಮಾಡಿದರು.
ಈ ಸಂದರ್ಭ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾದ ಹತ್ತು ಜನರಿಗೆ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶೂನ್ಯ ಮೊತ್ತದ ಬಿಲ್ ನೀಡಿದ್ದಾರೆ
ಈ ಸುದ್ದಿ ಓದಿದ್ದೀರಾ? ನಾಳೆಯಿಂದ ಗೃಹಜ್ಯೋತಿ ಯೋಜನೆ ಲೋಕಾರ್ಪಣೆ: ಪ್ರಿಯಾಂಕ್ ಖರ್ಗೆ
ಗೃಹಜ್ಯೋತಿ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಇಂಧನ ಸಚಿವ ಕೆ.ಜೆ. ಜಾರ್ಜ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂ ಖಾನ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಸೇರಿದಂತೆ ಹಲವು ನಾಯಕರು ಊಪಸ್ಥಿತರಿದ್ದರು.