ದೆಹಲಿ : ಸಂಪುಟ ರಚನೆ ಸಂಬಂಧ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿಎಂ ಸಿದ್ದರಾಮಯ್ಯ ಪಕ್ಷದ ವರಿಷ್ಠರ ಜೊತೆ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ. ನಾಳೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಇನ್ನು ಈ ನಡುವೆ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ ತಮ್ಮಬಣದವರಿಗೆ ಸಂಪುಟದಲ್ಲಿ ಸ್ಥಾನ ಕೊಡಿಸಲು ಕೊನೆ ಹಂತದ ಸರ್ಕಸ್ ಮಾಡ್ತಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಕಾರ್ಯದ ನಿಮಿತ್ತ ಗುರುವಾರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಯಾವುದೇ ಹೊತ್ತಿನಲ್ಲಿ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ಇನ್ನು ಈ ಎಲ್ಲದರ ನಡುವೆ ಸಿಎಂ ಸಿದ್ದರಾಮಯ್ಯ ಇಂದು ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.