
ಬೆಂಗಳೂರು : ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು (fill the posts) ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು.ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡುವಂತೆ ಸಿಎಂ ಸಿದ್ದರಾಮಯ್ಯ( CM Siddaramaiah)ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಇಂದು ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, UPSC ಮಾದರಿಯಲ್ಲೇ ರಾಜ್ಯದ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರುವ ಮೂಲಕ ಏಕರೀತಿಯ ನೇಮಕಾತಿ ವ್ಯವಸ್ಥೆ ಜಾರಿಗೊಳಿಸುವ ಕುರಿತು ಕ್ರಮಕೈಗೊಳ್ಳಲು ಅವರು ನಿರ್ದೇಶಿಸಿದರು.
UPSC ಲ್ಲಿ ಕೇವಲ ಗ್ರೂಪ್ A & ಗ್ರೂಪ್ B ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ KPSC ಕೇವಲ ಗ್ರೂಪ್ A ಮತ್ತು B ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್ C ನಂತಹ ಇತರ ನೇಮಕಾತಿಗಳನ್ನು KEA ಮಾಡುವ ಕುರಿತು ಸಭೆಯಲ್ಲಿ ಸಿಎಂ ಸಲಹೆ ನೀಡಿದರು.
371(J) ಗೆ ಸಂಬಂಧಿಸಿ ಕಲ್ಯಾಣ ಕರ್ನಾಟಕಕ್ಕೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಸಂಬಂಧ 2023ರಲ್ಲಿ ಹೊರಡಿಸಿದ್ದ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮಕೈಗೊಳ್ಳಬೇಕು ಎಂದು ಇದೇ ವೇಳೆ ಸಿಎಂ ಸೂಚನೆ ಕೊಟ್ಟರು.




