ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಹಿರಿಯ ಶಾಸಕರಾದ ಬಸವರಾಜ್ ರಾಯರೆಡ್ಡಿ, ಬಿ.ಆರ್.ಪಾಟೀಲ್, ಆರ್.ವಿ.ದೇಶಪಾಂಡೆ ಅವರಿಗೆ ನಿರಾಶೆಯಾಗಿತ್ತು. ನಿರಾಶೆಯಾಗಿದ್ದ ಶಾಸಕರಿಗೆ ವಿವಿಧ ಹುದ್ದೆಗಳಿಗೆ ನೇಮಿಸಿ ಇಂದು ಸರ್ಕಾರ ಆದೇಶ ಹೊರಡಿಸಿದೆ.
ಬಸವರಾಜ್ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಲಾಗಿದೆ. ಬಿ.ಆರ್.ಪಾಟೀಲ್ ಮುಖ್ಯಮಂತ್ರಿಯ ಸಲಹೆಗಾರರಾಗಿದ್ದಾರೆ. ಆರ್.ವಿ.ದೇಶಪಾಂಡೆ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷರಾಗಿದ್ದಾರೆ. ಮೂವರಿಗೂ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲಾಗಿದೆ.
ಬಸವರಾಜ ರಾಯರೆಡ್ಡಿ ಹಾಗೂ ಬಿ.ಆರ್.ಪಾಟೀಲ್ ಸರ್ಕಾರದ ವಿರುದ್ಧ ಆಗಾಗ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದರು. ಈ ಡ್ಯಾಮೇಜ್ ಕಂಟ್ರೋಲ್ ಮಾಡಲು ಸಿಎಂ ಸಿದ್ದರಾಮಯ್ಯ ಈ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.