• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ಪ್ರತಿಧ್ವನಿ by ಪ್ರತಿಧ್ವನಿ
December 14, 2025
in Top Story, ಕರ್ನಾಟಕ, ರಾಜಕೀಯ
0
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ವಿಮಾನದಲ್ಲಿ ಅಸ್ವಸ್ಥಗೊಂಡ ವಿದೇಶಿ ಯುವತಿಯನ್ನು ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್(Anjali Nimbalkar) ತಕ್ಷಣ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಕಾಪಾಡಿದ್ದಾರೆ. ಡಾ. ಅಂಜಲಿ ನಿಂಬಾಳ್ಕರ್ ಅವರ ಈ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah )ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Siddaramaih ; ಬಸವರಾಜ ಹೊರಟ್ಟಿ ಅವರನ್ನು ಹೋರಾಟದ ಹೊರಟ್ಟಿ ಎಂದು ಕರೆಯುತ್ತಾರೆ #pratidhvani #siddaramaiah

ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ.

Iqbal Hussain on DKS: ಜ.6ರಂದು ಡಿಕೆಶಿ ಮುಖ್ಯಮಂತ್ರಿ ಆಗುತ್ತಾರೆ ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ

ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂತವರು ಸಮಾಜಕ್ಕೆ ಮಾದರಿ. ನೂರುಕಾಲ ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಅಭಿನಂದಿಸಿದ್ದಾರೆ.

CM Siddaramaiah: ಜಾತಿ ವ್ಯವಸ್ಥೆ ದೂರವಾಗುವ ತನಕ ಸಮಾಜದಲ್ಲಿ ಅಸಮಾನತೆ ದೂರವಾಗುವುದಿಲ್ಲ..! #basavanna

ಆಗಿದ್ದೇನು..?

ಗೋವಾ ರಾಜ್ಯದ ಎಐಸಿಸಿ ಕಾರ್ಯದರ್ಶಿ ಆಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದರು. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿದೇಶಿ ಯುವತಿಯೊಬ್ಬರಿಗೆ ವಿಪರೀತ ನಡುಕ ಉಂಟಾಗಿ ಪ್ರಜ್ಞಾಹೀನರಾಗಿ ಕುಸಿದುಬಿದ್ದಿದ್ದರು. ಈ ವೇಳೆ ಕೂಡಲೇ ಸಹಾಯಕ್ಕೆ ನಿಂತ ಅಂಜಲಿ ನಿಂಬಾಳ್ಕರ್ ಅವರು ಕಾರ್ಡಿಯೋ–ಪಲ್ಮನರಿ ರಿಸಸ್ಸಿಟೇಷನ್ (ಸಿಪಿಆರ್‌) ಚಿಕಿತ್ಸೆ ನೀಡಿದರು. ಅಂಜಲಿ ನಿಂಬಾಳ್ಕರ್ ಅವರ ಸತತ ಪ್ರಯತ್ನದ ಫಲವಾಗಿ ಯುವತಿಯ ಉಸಿರಾಟ ಮರುಕಳಿಸಿತು. ಅಲ್ಲದೇ ಚಿಕಿತ್ಸೆಯ ನಂತರ ಯುವತಿ ಚೇತರಿಸಿಕೊಂಡಿದ್ದಾರೆ.

CM Siddaramaiah: ಶಾಸಕ ಇಕ್ಬಾಲ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಏನಂದ್ರು..! #siddaramaiah #dkshivakumar
Tags: anjali nimbalkarCM SiddaramaiahCPRGoaheart attackIndiaKarnataka
Previous Post

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

Next Post

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada