ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದು ಕಡೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ, ಇಡಿ ಕಾಟ ಕೊಡುತ್ತಿದ್ದರೆ, ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿವೆ.ಇದರ ಮಧ್ಯ ಕಾಂಗ್ರೆಸ್ ಪಕ್ಷದಲ್ಲೇ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ.ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ನಾನೇ ಮುಂದಿನ ಸಿಎಂ ಎಂದು ಹಲವು ಸಚಿವರು ಹೇಳಿಕೆ ನೀಡುತ್ತಾ ಬಂದಿದ್ದಾರೆ. ಹಾಗಾಗಿ ನಮ್ಮಲ್ಲಿ ಪ್ಲಾನ್ A B ಏನು ಇಲ್ಲ ನೇರವಾಗಿ C ಪ್ಲ್ಯಾನ್ ಅನುಷ್ಠಾನ ತರುತ್ತೇವೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮುಡಾ ಹಗರಣದಲ್ಲಿ ಸಾಕಷ್ಟು ಬೆಳವಣಿಗೆಯ ಹಿನ್ನಲೆ ಸಿಎಂ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದ್ದು, ಈ ಬೆನ್ನಲ್ಲೇ ದಲಿತ ಸಚಿವರಾದ ಗೃಹ ಸಚಿವ ಜಿ ಪರಮೇಶ್ವರ್, ಮಹದೇವಪ್ಪ, ಹಾಗೂ ಸತೀಶ್ ಜಾರಕಿಹೊಳಿ ಸೀಕ್ರೆಟ್ ಸಭೆಯನ್ನು ನಡೆಸಿದ್ದಾರೆ.ಈ ಸಭೆಯ ಕುರಿತು ಪ್ರತಿಕ್ರಿಯಿಸಿ,ಈ ಸಭೆಗೂ, ಇಡಿಗೂ, ಮುಡಾ ಹಗರಣಕ್ಕೂ ಸಂಬಂಧವಿಲ್ಲ. ಸಿಎಂ ಜೊತೆ ಇಡೀ ಸಚಿವ ಸಂಪುಟ ಇದೆ, ಅವರನ್ನು ಬಿಟ್ಟುಕೊಡುವ ಮಾತೇ ಇಲ್ಲ ಎಂದು ಹೇಳಿದರು.