• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಸಿಎಂ‌ ಸಿದ್ದರಾಮಯ್ಯ ಶಾಕ್!

ಪ್ರತಿಧ್ವನಿ by ಪ್ರತಿಧ್ವನಿ
August 3, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು.ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು, ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂಗೆ ವಿವರಿಸುತ್ತಾ, “ಒಟ್ಟು 45 ಕಿ.ಮೀನಲ್ಲಿ 35 ಕೀ.ಮಿ ಹೈವೇ ಕಾಮಗಾರಿ ಮುಗಿದಿದೆ. 10 ಕಿ.ಮೀ ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ” ಎಂದು ವಿವರಿಸಿದರು.

ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ ಕುಸಿತದ ಜಾಗದುದ್ದಕ್ಕೂ ನಡೆದು ಪರಿಶೀಲಿಸಿದ ಮುಖ್ಯಮಂತ್ರಿಗಳು ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಸ್‌ಡಿಆರ್‌ಎಫ್‌ ತಂಡದೊಂದಿಗೆ ಕೆಲ ಹೊತ್ತು ಚರ್ಚಿಸಿದರು.ಬಳಿಕ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ‌ ಅಧಿಕಾರಿ ವಿಲಾಸ್ ಅವರ ಮುಂದೆ ಸಿಎಂ ಸಾಲು ಸಾಲು ಪ್ರಶ್ನೆಗಳನ್ನು ಇಟ್ಟರು. ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಗೊಳಿಸಿಕೊಳ್ಳುವುದು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಿದ್ದೀರಿ. ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ? ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸಿದ್ದರೆ ಮಣ್ಣು ಕುಸಿತವನ್ನು ತಡೆಯಬಹುದಿತ್ತಲ್ಲವೇ? ಕಾಮಗಾರಿ ಆರಂಭಿಸುವ ಮೊದಲು ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿದ್ದೀರಾ? ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಏಕೆ ವಹಿಸಿಲ್ಲ ಎಂದು ಪ್ರಶ್ನಿಸಿದರು.

ವಿಲಾಸ್ ಅವರಿಂದ ಸೂಕ್ತ ಉತ್ತರ ಬರದಿದ್ದಾಗ ಒಟ್ಟಾರೆ ಸ್ಥಿತಿ ಗತಿ ಕುರಿತು ಕೇಂದ್ರ ಸಚಿವರಾದ ಗಡ್ಕರಿ ಅವರಿಗೆ ಪತ್ರ ಬರೆಯುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಶಾಸಕ ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್ , ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಸೇರಿ ಹಿರಿಯ ಅಧಿಕಾರಿಗಳ ತಂಡವೇ ಸ್ಥಳದಲ್ಲಿತ್ತು.

Tags: #[pratidhvanidigitalCM Siddaramaiah‌Congress PartyDCM DK Shivakumar
Previous Post

ನೋಡಪ್ಪ ಕೇರಳದಲ್ಲಿ ನಾವು 100 ಮನೆ ಕಟ್ಟಿಸಿ ಕೊಡ್ತಿವಿ..!

Next Post

ಅಕ್ರಮ ಮಾರ್ಗದ ಮೂಲಕ ಭಾರತ ಪ್ರವೇಶಿಸಿದ ಬಾಂಗ್ಲಾ ಪ್ರಜೆ; ಶಾಕಿಂಗ್ ವಿಡಿಯೋ ವೈರಲ್..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ಅಕ್ರಮ ಮಾರ್ಗದ ಮೂಲಕ ಭಾರತ ಪ್ರವೇಶಿಸಿದ ಬಾಂಗ್ಲಾ ಪ್ರಜೆ; ಶಾಕಿಂಗ್ ವಿಡಿಯೋ ವೈರಲ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada