ಬಿಜೆಪಿ ಎಂದರೆ ಸುಳ್ಳು, ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ (BJP) ನಿಸ್ಸೀಮರು. ಅಭಿವೃದ್ಧಿ ಮರೆತು ಸುಳ್ಳುಗಳ ಮೊರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ, ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿಧಾನಸಭೆಯಲ್ಲಿ ಬಿಜೆಪಿ ವಿರುದ್ಧ ಗುಡುಗಿದರು.
ಸರ್ಕಾರದ ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಹಾಗೂ ಜನಪರ ಯೋಜನೆಗಳಿಗೆ ರಾಜ್ಯಪಾಲರು ಕನ್ನಡಿ ಹಿಡಿದಿದ್ದಾರೆ. ಆದರೆ ಪ್ರತಿ ಪಕ್ಷ ನಾಯಕರಾದ ಆರ್.ಅಶೋಕ್ (R AShok) ರಾಜ್ಯಪಾಲರು ಮಾತಾಡಿದ್ದನ್ನು ಬಿಟ್ಟು ಅವರು ಮಾತಾಡದ್ದನ್ನೆಲ್ಲಾ ಪ್ರಸ್ತಾಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಸುಳ್ಳೇ ಆರೋಪ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದ ೯ ತಿಂಗಳಲ್ಲಿ ರಾಜ್ಯಕ್ಕೆ ೭೭ ಸಾವಿರ ಕೋಟಿ ಬಂಡವಾಳ ಹರಿದು ಬಂದಿದೆ. ಬಂಡವಾಳ ಹೂಡಿಕೆಗೂ, ಕಾನೂನು ಸುವ್ಯವಸ್ಥೆಗೂ ನೇರಾ ನೇರ ಸಂಬAಧ ಇರುತ್ತದೆ. ಸರ್ಕಾರದ ಹೂಡಿಕೆ ಪ್ರಮಾಣ ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ವಿವರಿಸಿದರು.
ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ, ಬಿಜೆಪಿಯಿಂದ ಯಡಿಯೂರಪ್ಪ, ಬೊಮ್ಮಾಯಿ, ಶೆಟ್ಟರ್, ಸದಾನಂದ ಗೌಡ ಮುಖ್ಯಮಂತ್ರಿ ಆಗಿದ್ದರು, ಇವರ್ಯಾರು ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ. ಆಪರೇಷನ್ ಕಮಲದ ಮೂಲಕ ನಮ್ಮ ಶಾಸಕರನ್ನೇ ಆಮಿಷವೊಡ್ಡಿ ಅಧಿಕಾರಕ್ಕೇರಿದವರು, ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ, ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.
ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ, ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದು ಸಿದ್ದರಾಮಯ್ಯ ಬಿಜೆಪಿಗರಿಗೆ ತಿರುಗೇಟು ನೀಡಿದರು.
#BJP #Congress #Siddaramaiah #RAshok #Assembly #CM #politics #BSYediyurappa #BasavarajBommai #Jagadish Shettar #
			
                                
                                
                                
