• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ ಎಂದು ತಿವಿದ ಸಿಎಂ..

ಪ್ರತಿಧ್ವನಿ by ಪ್ರತಿಧ್ವನಿ
February 14, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”
Share on WhatsAppShare on FacebookShare on Telegram

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ADVERTISEMENT
Sadhu kokila : ಅವರ ಜೀವನ ಕಷ್ಟ ಇತ್ತು  #pratidhvani #sadhukokila #JoeSimon #sandalwood #sandalwoodnews

ಇಲ್ಲಿನ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಂದಾಯ ಇಲಾಖೆಗೆ ಕೃಷ್ಣಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ. ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ. ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ದಾಖಲೆಗಳನ್ನು ಮಂಡಿಸಿದ್ದಾರೆ.

ಇದನ್ನೂ ಓದಿ : Supreme Court: ಸುಪ್ರೀಂ ಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಭರ್ಜರಿ ಜಯ..!

ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ‌ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯ್ತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023-18 ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ “ನುಡಿದಂತೆ ನಡೆದು” ದಾಖಲೆ ಮಾಡಿದ್ದೇವೆ ಎಂದು ಒತ್ತಿ ಹೇಳಿದ್ದಾರೆ.

ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 11,8000 ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಖಾತೆಗೆ ಹಾಕಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಅಮಾರ್ತ್ಯಸೇನ್, ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ವ್ಯಕ್ತಪಡಿಸಿದ್ದ ಸದಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ ಈ ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ.1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿಯಾಗಿದೆ. ನಮ್ಮ ಸರ್ಕಾರ 1000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ. ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತಹ ಎಲ್ಲರನ್ನೊಳಗೊಂಡ, ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರ ನಂಬಿಕೆಯಿರಿಸಿದೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಅವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ. ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಕೌಂಟರ್‌ ನೀಡಿದ್ದಾರೆ.

Dk Shivakumar on HDK: ಹಾವೇರಿ ಸಾಧನಾ ಸಮಾವೇಶದಲ್ಲಿ HDKಗೆ ಡಿಕೆಶಿವಕುಮಾರ್ ಖಡಕ್ ಟಾಂಗ್ #pratidhvani #bjpjds

ಸರ್ಕಾರ ನಿನ್ನೆಗೆ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನಾ ಸಮಾವೇಶ ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು,ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಮತ್ತೊಮ್ಮೆ ತಿಳಿಸುತ್ತೇನೆ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಅಬ್ಬರಿಸಿದ್ದಾರೆ.

ಕೇಂದ್ರ ಸರ್ಕಾರ, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ಕೊರತೆಯಾಗಿದ್ದು, ರಾಜ್ಯಕ್ಕೆ 12 – 15 ಸಾವಿರ ಕೋಟಿ ನಷ್ಟವಾಗಿದೆ. ನಮಗೆ ಬರುವ ನ್ಯಾಯಯುತ ಪಾಲು ಸಿಗುತ್ತಿಲ್ಲ. ಜೆಜೆಎಂ ನಲ್ಲಿ 15 ಸಾವಿರ ಕೋಟಿ ಇನ್ನೂ ಕೊಟ್ಟಿಲ್ಲ. ಈ ಅನುದಾನ ನೀಡಿದರೆ, ರಾಜ್ಯದ ಬಹಳಷ್ಟು ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತವೆ ಎಂದು ತಿಳಿಸಿದ್ದಾರೆ.

ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ಪರಿಶೀಲಿಸಿ, ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸಲಾಗುವುದು. ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ” ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿದ ಅಧಿಕಾರಿಗಳನ್ನೂ ಗುರುತಿಸಿ ಸನ್ಮಾನಿಸಲಾಯಿತು.

ಈ ಸಮಯದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಭೈರೇಗೌಡ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ವಿಧಾನ ಪರಿಷತ್ತಿನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ 20 ಕ್ಕೂ ಹೆಚ್ಚು ಮಂದಿ ಶಾಸಕರುಗಳು ಮತ್ತು ಮುಖಂಡರುಗಳು, ನಾಯಕರು ಉಪಸ್ಥಿತರಿದ್ದರು.

Tags: Basavraj Bommaibjp karnatakaBJP MPsCM Siddaramaiahcongress karnatakaDK ShivakumarGSTguarantee schemeshaveri newsJagadish ShettarKarnataka GovernmentKarnataka PoliticsKrishna Byre GowdaNarendra ModiPratidhvaniUnion Government Of India
Previous Post

ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

Next Post

ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಪ್ರತಿಧ್ವನಿ ವಿಶೇಷ ವರದಿ : ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
Next Post
ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada