• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಅವರೆಲ್ಲಾ ಸಾಮಾಜಿಕ ನ್ಯಾಯ, ಸಂವಿಧಾನದ ವಿರೋಧಿಗಳು : ಗಣತಂತ್ರ ದಿನದಂದೇ ವಿಪಕ್ಷಗಳ ವಿರುದ್ಧ ಸಿಎಂ ಗುಡುಗು

ಪ್ರತಿಧ್ವನಿ by ಪ್ರತಿಧ್ವನಿ
January 26, 2026
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಅವರೆಲ್ಲಾ ಸಾಮಾಜಿಕ ನ್ಯಾಯ, ಸಂವಿಧಾನದ ವಿರೋಧಿಗಳು : ಗಣತಂತ್ರ ದಿನದಂದೇ ವಿಪಕ್ಷಗಳ ವಿರುದ್ಧ ಸಿಎಂ ಗುಡುಗು
Share on WhatsAppShare on FacebookShare on Telegram

ಬೆಂಗಳೂರು : ದೇಶದೆಲ್ಲೆಡೆ 77ನೇ ಗಣರಾಜ್ಯೋತ್ಸವದ ಸಂಭ್ರಮ, ಸಡಗರ ಮನೆಮಾಡಿದ್ದು, ರಾಷ್ಟ್ರ ರಾಜ್ಯಧಾನಿ ನವದೆಹಲಿಯು ಸಂಪೂರ್ಣ ತ್ರಿವರ್ಣಮಯವಾಗಿದೆ. ರಾಜ್ಯದಲ್ಲಿಯೂ ಗಣತಂತ್ರ ದಿನದ ಸಡಗರ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರುವುದರ ಜೊತೆಗೆ ಸಂದೇಶಗಳನ್ನು ನೀಡಿದ್ದಾರೆ.

ADVERTISEMENT

ಈ ಕೆಳಗಿನಂತೆ ಸಿಎಂ ಸಿದ್ದರಾಮಯ್ಯ ತಮ್ಮ ಸಂದೇಶವನ್ನು ತಿಳಿಸಿದ್ದಾರೆ.. 

ಕರ್ನಾಟಕದ ಸಮಸ್ತ ಜನ ಕೋಟಿಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಭಾರತವು ತನ್ನನ್ನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು ಇದೇ ಜನವರಿ 26ಕ್ಕೆ 76 ವರ್ಷಗಳು ಪೂರ್ಣಗೊಂಡಿದೆ. 77ನೇ ಗಣರಾಜ್ಯೋತ್ಸವದ ಶುಭ ದಿನವಾದ ಇಂದು ಸಂವಿಧಾನದ ಮಹತ್ವ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸುವ ಒಂದಿಷ್ಟು ಚಿಂತನೆಗಳನ್ನು ನನ್ನ ನಾಡಿನ ಜನತೆಯಲ್ಲಿ ಹಂಚಿಕೊಳ್ಳಬಯಸುತ್ತೇನೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಲು ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಆಶಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಗ್ಯಾರಂಟಿಯಿಂದ ನಮ್ಮ ಸರ್ಕಾರ ಬಡವರ ಬದುಕನ್ನು ಬದಲಾಯಿಸಿದೆ : ಮೋದಿ ವಿರುದ್ಧ ಲಾಡ್‌ ವಾಗ್ದಾಳಿ..

ಕರ್ನಾಟಕದಲ್ಲಿ 800 ವರ್ಷಗಳ ಹಿಂದೆಯೇ ಪ್ರಜಾರಾಜ್ಯದ ಬೀಜಾಂಕುರವಾಗಿತ್ತು ಎನ್ನುವುದನ್ನು ಈ ಸಂದರ್ಭದಲ್ಲಿ ನಾವೆಲ್ಲ ಹೆಮ್ಮೆಯಿಂದ ನೆನಪು ಮಾಡಿಕೊಳ್ಳಬೇಕಾಗಿದೆ. ಅದು ಸಾಧ್ಯವಾಗಿರುವುದು ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನವರ ನೇತೃತ್ವದಲ್ಲಿ ನಡೆದಿದ್ದ ಶರಣ ಚಳವಳಿಯಿಂದ. ಕೂಡಲ ಸಂಗಮದ ಅನುಭವ ಮಂಟಪ ಪ್ರಪಂಚದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾದರಿ ಸ್ವರೂಪದ್ದು. ಸಮಾಜದ ಅತ್ಯಂತ ಕೆಳಸ್ತರದ ಜನರೂ ಕೂಡಾ ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಅಭಿಪ್ರಾಯ, ಅಹವಾಲುಗಳನ್ನು ವ್ಯಕ್ತಪಡಿಸುವ ಸಮಾನವಕಾಶ ಅನುಭವ ಮಂಟಪದಲ್ಲಿತ್ತು. ಇದು ನಾವಿಂದು ಅನುಭವಿಸುತ್ತಿರುವ ಪ್ರಜಾಪ್ರಭುತ್ವ ವ್ಯವಸ್ಥೆಯ ಅಡಿಗಲ್ಲು ಎಂದು ತಿಳಿಸಿದ್ದಾರೆ.

ಭಾರತದಲ್ಲಿ ನ್ಯಾಯಯುತ ಸಾಮಾಜಿಕ ವ್ಯವಸ್ಥೆಯನ್ನು ನಿರ್ಮಿಸುವ ಈ ತೀರ್ಮಾನ ಒಂದು ಚಾರಿತ್ರಿಕೆ ಸಂದರ್ಭದಲ್ಲಿ ಮೈದಾಳಿತು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಈಗಿನ ಸಂವಿಧಾನ ಅಂಗೀಕಾರವಾಗುವುದಕ್ಕಿಂತ ಮೊದಲು ಭಾರತದಲ್ಲಿ ಒಂದು ಅಲಿಖಿತ ಸಂವಿಧಾನ ಇತ್ತು. ಅದು ಅಸಮಾನತೆಯನ್ನು ಒಪ್ಪಿಕೊಂಡ, ಲಿಂಗ ಮತ್ತು ಜಾತಿ ಆಧಾರದಲ್ಲಿಯೇ ಮನುಷ್ಯನ ಯೋಗ್ಯತೆ, ಅವಕಾಶಗಳನ್ನು ನಿರ್ಧರಿಸುವ ಅಲಿಖಿತ ಸಂವಿಧಾನ.
6) ಆ ಸಾಂಪ್ರದಾಯಿಕ ಸಾಮಾಜಿಕ ವ್ಯವಸ್ಥೆಯಲ್ಲಿ ಕೆಲವು ವರ್ಗಗಳು ಅಂದರೆ ಶೂದ್ರರು, ಮಹಿಳೆಯರು ಮತ್ತು ಅಸ್ಪೃಶ್ಯರು ಸಂಪತ್ತನ್ನು ಹೊಂದುವ, ಜ್ಞಾನವನ್ನು ಗಳಿಸುವ, ಘನತೆಯಿಂದ ಬದುಕುವ ಹಕ್ಕಿನಿಂದ ವಂಚಿತರಾಗಿದ್ದರು. ಈ ಮನುಷ್ಯವಿರೋಧಿ ಅಲಿಖಿತ ಸಂವಿಧಾನವನ್ನು ತಿರಸ್ಕರಿಸಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೊಸದೊಂದು ಸಂವಿಧಾನವನ್ನು ಭಾರತಕ್ಕೆ ನೀಡಿದರು ಎಂದು ಸ್ಮರಿಸಿದ್ದಾರೆ.

ಭಾರತದಲ್ಲಿ ಆಧುನಿಕ ಹಾಗೂ ಪ್ರಜಾಪ್ರಭುತ್ವವಾದಿ ರಾಷ್ಟ್ರಪ್ರಭುತ್ವದ ಹುಟ್ಟಿನೊಂದಿಗೆ ಈ ಬಗೆಯ ತಡೆಗೋಡೆಗಳನ್ನು ಮುರಿಯುವ ಪ್ರಯತ್ನ ಪ್ರಾರಂಭವಾಯಿತು. ಯಾರು ಯಾವ ಸಾಮಾಜಿಕ ಮೂಲದಿಂದಲೇ ಬಂದಿರಲಿ, ಅಭಿವೃದ್ಧಿಯ ಹಾಗೂ ಪ್ರಗತಿಯ ಫಲ ಎಲ್ಲರಿಗೂ ಸೇರಬೇಕು ಎಂಬುದು ಸಂವಿಧಾನದಲ್ಲಿ ಸೂಚಿತವಾದ ಸರ್ವರನ್ನೂ ಒಳಗೊಳ್ಳುವ ಸಾಮಾಜಿಕ ಮರುರಚನೆಯ ನಿರ್ಣಯವಾಗಿದೆ ಎಂದು ಹೇಳಿದ್ದಾರೆ.

ಭಾರತ ಒಂದು ರಾಷ್ಟ್ರವಾಗಿ ಬೆಳೆಯಬೇಕಾದರೆ, ಸಾಮಾಜಿಕ ಸಂಘರ್ಷಗಳಿಂದ ಹೊರಬರಬೇಕಾದರೆ ಈ ಸಮಾಜದ ಪುರಾತನ ಕಾಲದ ಶ್ರೇಣಿಕೃತ ವ್ಯವಸ್ಥೆಗಳನ್ನು ಒಡೆದು ಸಮಾಜದ ಪುನರ್ ರಚನೆ ಮಾಡಲೇಬೇಕಾಗುತ್ತದೆ. ನಾಗರಿಕನೊಬ್ಬನ ಸ್ಥಾನಮಾನ ಆತನ ಸತ್ವ-ಸಾಧನೆಗಳಿಂದ ನಿರ್ಣಯವಾಗಬೇಕೇ ಹೊರತು, ಆತನ ಹುಟ್ಟು ಇಲ್ಲವೇ ಪುರಾತನ ಕಾಲದಿಂದ ಬಂದ ಸಾಮಾಜಿಕ ಮೂಲಗಳಿಂದ ಅಲ್ಲ ಎಂಬುದನ್ನು ಪ್ರತಿಪಾದಿಸುವ ನಾಗರಿಕ ಸಮಾಜದ ನಿರ್ಮಾಣ ನಮ್ಮ ಸಂವಿಧಾನದ ಮೂಲ ಆಶಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ಅರ್ಪಿಸುವಾಗ ಮುಂದಿನ ದಿನಗಳಲ್ಲಿ ದೇಶವನ್ನು ಆಳುವವರಿಗೆ ಎರಡು ಮುಖ್ಯವಾದ ಜವಾಬ್ದಾರಿಗಳನ್ನು ಒತ್ತು ಕೊಟ್ಟು ಹೇಳಿದ್ದರು. ಮೊದಲನೆಯದು ಈ ದೇಶದಲ್ಲಿ ರಾಜಕೀಯ ಪ್ರಜಾಪ್ರಭುತ್ವದ ರಕ್ಷಣೆ, ಆ ಮೂಲಕ ದೇಶದ ಸಾರ್ವಭೌಮತೆಯನ್ನು ಕಾಪಾಡುವುದು. ಎರಡನೆಯದಾಗಿ ಆರ್ಥಿಕ ಪ್ರಜಾಪ್ರಭುತ್ವವನ್ನು ಸಾಧಿಸುತ್ತಾ ಹೋಗುವುದು. ದೇಶ ನಿಜಕ್ಕೂ ಬಲಗೊಳ್ಳುವುದು ಮತ್ತು ಸದೃಢಗೊಳ್ಳುವುದು ಆರ್ಥಿಕ ಪ್ರಜಾಪ್ರಭುತ್ವದಿಂದ. ಇದನ್ನು ಸಾಧಿಸಬೇಕೆಂದರೆ ಸಾವಿರಾರು ಜಾತಿಗಳಾಗಿ, ಮೇಲು ಕೀಳು ಎಂಬ ತಾರತಮ್ಯಗಳಲ್ಲಿ ಛಿದ್ರವಾಗಿರುವ ಈ ದೇಶದಲ್ಲಿ ಸಾಮಾಜಿಕ ನ್ಯಾಯದ ಮೂಲಕ ಆರ್ಥಿಕ ಸಮಾನತೆಯನ್ನು ಸ್ಥಾಪಿಸಿ ದೇಶವನ್ನು ಆಂತರಿಕವಾಗಿ ಸಧೃಡಗೊಳಿಸಬೇಕಾಗಿದೆ. ಕೇವಲ ರಾಜಕೀಯ ಪ್ರಜಾತಂತ್ರದಿಂದ ನಾವು ತೃಪ್ತರಾಗಬಾರದು, ಅದನ್ನು ಸಾಮಾಜಿಕ ಪ್ರಜಾಪ್ರಭುತ್ವವನ್ನು ಮಾಡುವ ನಮ್ಮ ಪ್ರಯತ್ನ ಜಾರಿಯಲ್ಲಿರಬೇಕು ಎಂದು ಅವರು ಬುದ್ದಿ ಮಾತು ಹೇಳಿದ್ದರು ಎಂದು ನೆನಪಿಸಿದ್ದಾರೆ.

ನಮ್ಮ ಸರ್ಕಾರದ ಎಲ್ಲ ಯೋಚನೆ-ಯೋಜನೆಗಳಿಗೆ ಮಾರ್ಗದರ್ಶನ ನೀಡುತ್ತಾ ಬಂದಿರುವುದು ನಮ್ಮ ಸಂವಿಧಾನ. ಅದರೊಳಗಿನ ಅಕ್ಷರ-ಅಕ್ಷರಗಳಿಗೂ ನಾನು, ನಮ್ಮ ಪಕ್ಷ ಮತ್ತು ಸರ್ಕಾರ ಬದ್ದವಾಗಿದೆ. ರಾಜ್ಯದ ಜನತೆಯ ಬಡತನ, ಅನಾರೋಗ್ಯ, ಅನಕ್ಷರತೆ, ಅಪೌಷ್ಠಿಕತೆಯನ್ನು ನಿವಾರಿಸಿ ಹಸಿವು ಮುಕ್ತ, ಅನಾರೋಗ್ಯ ಮುಕ್ತ, ಅನಕ್ಷರತೆ ಮುಕ್ತ ಮತ್ತು ಭಯ ಮುಕ್ತ ಸಮಾಜವನ್ನು ನಿರ್ಮಿಸುವುದು ಚುನಾಯಿತ ಸರ್ಕಾರದ ಸಂವಿಧಾನ ಬದ್ದ ಕರ್ತವ್ಯವಾಗಿದೆ. ಬಡತನ ಎನ್ನುವುದು ಅಪರಾಧ ಅಲ್ಲ. ಇದು ಅಸಮಾನ ಸಂಪತ್ತು ಮತ್ತು ಅವಕಾಶ ಹಂಚಿಕೆಯ ಫಲ ಎನ್ನುವುದನ್ನು ನಾವು ಮರೆಯಬಾರದು. ನಮ್ಮ ಸಂಪತ್ತು ಮತ್ತು ಅವಕಾಶದ ಸಮಾನ ಹಂಚಿಕೆಯಾದಾಗ ಮಾತ್ರ ಸಮೃದ್ಧ, ಬಲಿಷ್ಠ ಮತ್ತು ಕ್ರಿಯಾಶಾಲಿಯಾದ ಸಮಾಜ ನಿರ್ಮಾಣ ಸಾಧ್ಯ ಎನ್ನುವುದನ್ನು ನಾನು ಬಲವಾಗಿ ನಂಬಿದ್ದೇನೆ.
ಸಂವಿಧಾನದ ಪರಿಚ್ಚೇದ 39ರ ಪ್ರಕಾರ ಪ್ರತಿಯೊಬ್ಬ ಪ್ರಜೆಗೂ ಜೀವನ ನಿರ್ವಹಣೆಯ ಹಕ್ಕನ್ನು ಅಂದರೆ ಬದುಕುವ ಹಕ್ಕನ್ನು ನೀಡಬೇಕೆಂದು ಹೇಳುತ್ತದೆ. ಪರಿಚ್ಛೇದ 15 (3) ಪ್ರತಿಯೊಬ್ಬ ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ವಿಶೇಷ ಕಾನೂನು ಮಾಡಲು ಅವಕಾಶ ನೀಡಿದೆ ಎಂದು ಹೇಳಿದ್ದಾರೆ.

ಜನರ ಪೌಷ್ಠಿಕತೆ ಮತ್ತು ಜೀವನ ಮಟ್ಟವನ್ನು ಹೆಚ್ಚಿಸಿ ಆರೋಗ್ಯವನ್ನು ಅಭಿವೃದ್ದಿ ಪಡಿಸುವುದು ಒಂದು ಸರ್ಕಾರದ ಪ್ರಾಥಮಿಕ ಕರ್ತವ್ಯ ಎಂದು, ಸಂವಿಧಾನದ ಪರಿಚ್ಛೇದ 47ರಡಿಯ ರಾಜನೀತಿಯ ನಿರ್ದೇಶಿತ ತತ್ವ ಹೇಳಿದೆ. ನಮ್ಮ ಸರ್ಕಾರ ತನ್ನ ಮೂಲಭೂತ ಕರ್ತವ್ಯವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯಡಿ (Universal Basic Income) ರೂಪಿತವಾದ ನಮ್ಮ ಗ್ಯಾರಂಟಿ ಯೋಜನೆಗಳು ಇಂದು ಅನ್ನಭಾಗ್ಯ ಯೋಜನೆಯ ಮೂಲಕ ಆಹಾರ ಭದ್ರತೆಯನ್ನು, ಗೃಹಜ್ಯೋತಿಯ ಮೂಲಕ ಇಂಧನ ಖಾತರಿಯನ್ನು ನಾಡಿನ ಜನತೆಗೆ ಒದಗಿಸಿವೆ. ಗೃಹಲಕ್ಷ್ಮಿ ಯೋಜನೆಯು ಆರ್ಥಿಕವಾಗಿ ಹಿಂದುಳಿದಿರುವ ಈ ನಾಡಿನ ಕುಟುಂಬಗಳ ಯಜಮಾನಿಯರಿಗೆ ಮಾಸಿಕ 2 ಸಾವಿರ ರೂಪಾಯಿ ಒದಗಿಸುವ ಮೂಲಕ ಅವರ ಕನಿಷ್ಠ ಅಗತ್ಯಗಳಿಗೆ ಬೆಂಗಾವಲಾಗಿದೆ. ಅದೇ ರೀತಿ, ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣದ ಖಾತರಿಯನ್ನು ನೀಡಿ ಅವರನ್ನು ಸ್ವಾವಲಂಬಿಗಳಾಗಿಸಿದೆ. ಯುವನಿಧಿ ಯೋಜನೆಯು ಪದವೀಧರ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೀಡುವ ಮೂಲಕ ಅವರಲ್ಲಿ ಮಾನಸಿಕ ಸ್ಥೈರ್ಯ ತುಂಬಿ ಉತ್ತಮ ಉದ್ಯೋಗಾವಕಾಶಗಳಿಗೆ ತರಬೇತಿ ಪಡೆಯಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಇಂದು ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಯೊಂದು ಕುಟುಂಬವು ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ತಿಂಗಳಿಗೆ 5-6 ಸಾವಿರ ರೂಪಾಯಿ ಉಳಿತಾಯ ಕಾಣುತ್ತಿದ್ದು, ವಾರ್ಷಿಕ 60 ರಿಂದ 70 ಸಾವಿರ ರೂಪಾಯಿ ಈ ಕುಟುಂಬಗಳಿಗೆ ಉಳಿತಾಯವಾಗುತ್ತಿದೆ. ಅದೇ ರೀತಿ, ಮಧ್ಯಮ, ಮೇಲ್ಮಧ್ಯಮ ವರ್ಗದ ಕುಟುಂಬಗಳಿಗೂ ಸಹ ಗೃಹಜ್ಯೋತಿ, ಶಕ್ತಿ, ಯುವನಿಧಿಯಂತಹ ಗ್ಯಾರಂಟಿ ಯೋಜನೆಗಳಿಂದಾಗಿ ವಾರ್ಷಿಕ 25 ರಿಂದ 30 ಸಾವಿರ ರೂಪಾಯಿ ಉಳಿತಾಯ ಕಾಣುತ್ತಿದ್ದಾರೆ. ಈ ಹಣವನ್ನು ಅವರು ತಮ್ಮ ಮಕ್ಕಳ ಶಿಕ್ಷಣಕ್ಕೆ, ಆರೋಗ್ಯಕ್ಕೆ, ಭವಿಷ್ಯದ ಉಳಿತಾಯಕ್ಕೆ ಬಳಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಪರಿಣಾಮ ಇಂದು ಸಮಾಜದಲ್ಲಿ ಭದ್ರತೆಯ ಭಾವನೆ ಮನೆ ಮಾಡಿದೆ ಎಂದು ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಬಣ್ಣಿಸಿದ್ದಾರೆ.

HD Kumarswamy : ಬಿಡದಿಯ ಭೈರಮಂಗಲ ವೃತ್ತದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟ  #pratidhvani #hdk

ಮುಖ್ಯಮಂತ್ರಿಯಾಗಿ ಸಂವಿಧಾನದ ಆಶಯಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ತಲೆಮಾರುಗಳ ಅಸಮಾನತೆ ಮತ್ತು ತಾರತಮ್ಯವನ್ನು ಅನುಭವಿಸಿದವರಿಗೆ ಅವಕಾಶಗಳನ್ನು ಒದಗಿಸುವ ಒಂದು ಅಸ್ತ್ರವಾಗಿ ಅಭಿವೃದ್ಧಿಯನ್ನು ನಾನು ಪರಿಗಣಿಸಿದ್ದೇನೆ. ಸಂವಿಧಾನವನ್ನು ವಿರೋಧಿಸುತ್ತಿರುವವರು ಸಾಮಾಜಿಕ ಬದಲಾವಣೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವವರು. ಅವರು ಬಡವರ, ರೈತರ, ಕಾರ್ಮಿಕರ, ದಲಿತರ, ಶೋಷಿತರ ಪರವಾದ ಕಾನೂನುಗಳು ಮತ್ತು ಕಾರ್ಯಕ್ರಮಗಳನ್ನು ವಿರೋಧಿಸುವವರು ಎನ್ನುವುದನ್ನು ಜನತೆ ಅರ್ಥಮಾಡಿಕೊಳ್ಳಬೇಕು ಎಂಂದು ಚಾಟಿ ಬೀಸಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಸಂವಿಧಾನವನ್ನು ಅರ್ಪಿಸಿದಾಗಲೂ ಅದನ್ನು ವಿರೋಧಿಸುವವರಿದ್ದರು. ಈಗಲೂ ಆಗಾಗ ಸಂವಿಧಾನವನ್ನು ಬದಲಾಯಿಸುವ, ಕಿತ್ತೊಗೆಯುವ ಕೂಗುಗಳು ಅಲ್ಲಲ್ಲಿ ಕೇಳಿಬರುತ್ತಿದೆ. ಆದರೆ ಇದು ಸುಲಭದ ಕೆಲಸ ಅಲ್ಲ ಎಂದು ಅರ್ಥಮಾಡಿಕೊಂಡವರು ಅದನ್ನು ನಿಧಾನವಾಗಿ ದುರ್ಬಲಗೊಳಿಸುವ ಪ್ರಯತ್ನದಲ್ಲಿದ್ದಾರೆ. ಇದು ನಿಧಾನವಾಗಿ ವಿಷ ಉಣಿಸುವ ಸಂಚು. ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆಯನ್ನು ಕಿತ್ತುಕೊಳ್ಳುವ ಮೂಲಕ ಸಂವಿಧಾನವನ್ನು ಅಪ್ರಸ್ತುತ ಮಾಡುವ ಈ ಸಂಚಿನ ಬಗ್ಗೆ ನಾವು ಎಚ್ಚರದಿಂದ ಇರಬೇಕು. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ದೇಶ ಸುಭದ್ರವಾಗಿ ಉಳಿಯುತ್ತದೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಗಣರಾಜ್ಯೋತ್ಸವದ ದಿನವಾದ ಇಂದು ಸಂವಿಧಾನವನ್ನು ರಕ್ಷಿಸುವ ಪ್ರತಿಜ್ಞೆಯನ್ನು ಮಾಡಬೇಕಾಗಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಸರ್ಕಾರದ ಯೋಜನೆಗಳು ನೂರಾರು. ಆದರೆ ಅವುಗಳ ಹಿಂದಿನ ಸದಾಶಯ ಮಾತ್ರ ಒಂದೇ. ಅದು ಸಮಸಮಾಜದ ನಿರ್ಮಾಣ, ಸರ್ವರಿಗೂ ಸಮಪಾಲು ಸಮಬಾಳು. ಸರ್ವರನ್ನು ಸಶಕ್ತರನ್ನಾಗಿಸಿ ಶಕ್ತಿಶಾಲಿ ರಾಜ್ಯ ಕಟ್ಟುವ ನಮ್ಮ ಪ್ರಯತ್ನಕ್ಕೆ ನಿಮ್ಮೆಲ್ಲರ ಸಹಕಾರ, ಬೆಂಬಲ, ಆಶೀರ್ವಾದ ಇರಲಿ ಎಂಬ ಮನವಿಯೊಂದಿಗೆ ತಮ್ಮೆಲ್ಲರಿಗೂ ಮತ್ತೊಮ್ಮೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಸಲ್ಲಿಸಿ ನನ್ನ ಮಾತುಗಳನ್ನು ಮುಗಿಸುತ್ತೆನೆ.

ನಮಸ್ಕಾರ,

ಜೈ ಹಿಂದ್ – ಜೈ ಕರ್ನಾಟಕ – ಜೈ ಸಂವಿಧಾನ್

Tags: 77th republic day77th republic day indiaanti-constitutionconstitution of indiaDr B R Ambedkarguarantee schemeskannada newskarnataka newsNational FestivalPratidhvanishakti schemesiddaramaihsocial Justice
Previous Post

Daily Horoscope: ಸೋಮವಾರದ ಅದೃಷ್ಟ ರಾಶಿಗಳಿವು..!

Next Post

ರಾಜ್ಯ ಸರ್ಕಾರದ ಸಂಪೂರ್ಣ ಭಾಷಣ ಓದಿದ ರಾಜ್ಯಪಾಲ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
Next Post
ರಾಜ್ಯ ಸರ್ಕಾರದ ಸಂಪೂರ್ಣ ಭಾಷಣ ಓದಿದ ರಾಜ್ಯಪಾಲ

ರಾಜ್ಯ ಸರ್ಕಾರದ ಸಂಪೂರ್ಣ ಭಾಷಣ ಓದಿದ ರಾಜ್ಯಪಾಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada