ಇಂದು (ಜ.13) ನಡೆದ ಕಾಂಗ್ರೆಸ್ (Congress) ಪಕ್ಷದ ಸರ್ವ ಸದಸ್ಯರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (Cm siddaramaiah) ಆಡಿದ ಮಾತುಗಳು ತೀವ್ರ ಅಚ್ಚರಿ ಮತ್ತು ಗೊಂದಲಕ್ಕೆ ಕಾರಣವಾಗಿದೆ. ಪಕ್ಷದ ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ, ಇದ್ದಕ್ಕಿದ್ದಂತೆ ತ್ಯಾಗದ ಮಾತುಗಳನ್ನಾಡಿದ್ದಾರೆ. ಸಿಎಂ ಬಾಯಲ್ಲಿ ಈ ಮಾತುಗಳು ಬಂದಿದ್ದು ಹಲವು ರಾಜಕೀಯ ಲೆಕ್ಕಾಚಾರಗಳಿಗೆ ದಾರಿ ಮಾಡಿಕೊಟ್ಟಿದೆ.

ಹೌದು, ಹೊಸ ವರ್ಷದ ಆರಂಭದಲ್ಲೇ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದಲಾವಣೆ, ಅಧಿಕಾರ ಹಂಚಿಕೆಯ ಬಗ್ಗೆ ತೀವ್ರಗತಿಯ ಬೆಳವಣಿಗೆಗಳು ನಡೆಯುತ್ತಿದ್ದು, ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಸಿಎಂ ಸ್ಥಾನ ತ್ಯಾಗ ಮಾಡುವ ಮತನಾಡಿದ್ರಾ ಎಂಬ ಚರ್ಚೆ ಗರಿಗೆದರಿದೆ.

ಮಹಾತ್ಮ ಗಾಂಧಿಯವರು (Mahatma gandhi) ಬಹಳ ದೊಡ್ಡ ತ್ಯಾಗ ಮಾಡಿದ್ದಾರೆ. ನಮ್ಮ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ (Sonia gandhi) ಅವರು ಕೂಡ ಅಧಿಕಾರ ತ್ಯಾಗ ಮಾಡಿದ್ದಾರೆ. ರಾಹುಲ್ ಗಾಂಧಿ (Rahul gandhi) ಕೂಡ ಅಪಾರ ತ್ಯಾಗ ಮಾಡಿದ್ದಾರೆ. ಹೀಗಿರುವಾಗ ನಾವು ಕೂಡ ಸಮಯ ಬಂದಾಗ ತ್ಯಾಗ ಮಾಡಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆ ಸಿಎಂ ಸಿದ್ದರಾಮಯ್ಯ ಈ ಹೇಳಿಕೆ , ಪರೋಕ್ಷವಾಗಿ ಯಾವುದೋ ರಾಜಕೀಯ ಸುಳಿವು ನೀಡಿದಂತೆ ಭಾಸವುತ್ತಿದೆ. ಹೈಕಮಾಂಡ್ ಅನತಿಯಂತೆ ಸಿದ್ದು ತಮ್ಮ ಸಿಎಂ ಸ್ಥಾನವನ್ನು ಬಿಟ್ಟುಕೊಡುವ ನಿರ್ಧಾರ ಮಾಡಿದ್ದಾರೆ ಎಂಬ ರಾಜಕೀಯ ಚರ್ಚೆಗಳು ಆರಂಭವಾಗಿದ್ದು, ಮುಂದಿನ ರಾಜಕೀಯ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ.