ಬೆಂಗಳೂರು : ಮಾರ್ಚ್ 28ರಂದು ನಡೆಯಲಿರುವ ಐಪಿಎಲ್ ಕ್ರಿಕೆಟ್‌ನ ಉದ್ಘಾಟನಾ ಪಂದ್ಯ ವೀಕ್ಷಿಸಲು ಶಾಸಕರಿಗೆ ತಲಾ 4 ಟಿಕೆಟ್‌ಗಳನ್ನು ನೀಡಬೇಕೆಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಪಂದ್ಯದ ಸಮಾರಂಭಕ್ಕೆ ಆಹ್ವಾನ ನೀಡಲು ಆಗಮಿಸಿದ್ದ ರಾಜ್ಯ ಕ್ರಿಕೆಟ್ ನಿಯಂತ್ರಣ ಮಂಡಳಿ (KSCA) ಅಧ್ಯಕ್ಷ ವೆಂಕಟೇಶ್ ಪ್ರಸಾದ್‌ಗೆ ತಿಳಿಸಿದ್ದಾರೆ.
ನಿನ್ನೆಯಷ್ಟೇ ಈ ಬಗ್ಗೆ ವಿಧಾನಸಭೆಯಲ್ಲಿ ಶಾಸಕರು ತಮಗೂ ಟಿಕೆಟ್ ನೀಡಬೇಕೆಂದು ತಮ್ಮ ಅಳಲು ತೋಡಿಕೊಂಡಿದ್ದರು. ಇದು ರಾಷ್ಟ್ರಮಟ್ಟದಲ್ಲಿ ಚರ್ಚೆಗೂ ಗ್ರಾಸವಾಗಿದೆ. ಈ ನಡುವೆಯೇ ಶಾಸಕರ ಬೆನ್ನಿಗೆ ಸ್ವತಃ ಮುಖ್ಯಮಂತ್ರಿಗಳೇ ನಿಂತಿರುವುದರಿಂದ ಶಾಸಕರು, ಮಂತ್ರಿಗಳಿಗಿದ್ದ ಟಿಕೆಟ್ ಆತಂಕ ದೂರವಾದಂತಾಗಿದೆ.
ಇನ್ನೂ ಈ ಕುರಿತು ಮಾಹಿತಿ ನೀಡಿರುವ ವೆಂಕಟೇಶ್ ಪ್ರಸಾದ್ ಒಬ್ಬ ಶಾಸಕರಿಗೆ ಎರಡು ಟಿಕೆಟ್‌ನಂತೆ ಎಲ್ಲ ಶಾಸಕರಿಗೂ ಕ್ರಿಕೆಟ್ ಮ್ಯಾಚ್ ನೋಡಲು ಅವಕಾಶ ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ.






