ಕಳೆದ ಎರಡು ತಿಂಗಳಿಂದ ತಮ್ಮ ಮೇಲೆ ನಿರಂತರ ಆರೋಪಗಳನ್ನು ಹೊರಿಸುತ್ತ ಬಂದಿರುವ ವಿರೋಧ ಪಕ್ಷ ಬಿಜೆಪಿ ಮತ್ತು ಆರ್‌ಎಸ್‌ಎಸ್ (BJP & RSS) ವಿರುದ್ಧ ಸಿಎಂ ಸಿದ್ದರಾಮಯ್ಯ (Cm siddaramaiah)ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿದರೆ ನಾವೆಲ್ಲ ಉಳಿಯಲು ಸಾಧ್ಯ. ನಾನು ಮುಖ್ಯಮಂತ್ರಿ ಆಗಿದ್ದೇ ಸಂವಿಧಾನದಿಂದ ಎಂದು ಹೇಳಿದ್ದಾರೆ.
ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಾಮಾಜಿಕ ನ್ಯಾಯದ (Social justice) ವಿರೋಧಿಗಳು.ಅವರಿವೆ ಸಮಾನತೆಯಲ್ಲಿ ಯಾವುದೇ ನಂಬಿಕೆಯಿಲ್ಲ.ಅವರು ಮನುಷ್ಯರನ್ನು ಜಾತಿ ಮತ್ತು ಧರ್ಮದ ಹೆಸರಲ್ಲಿ ವಿಂಗಡಿಸುವ ಮನುಸ್ಮೃತಿಯ ಪರವಾಗಿರುವವರು ಎಂದು ಕಿಡಿಕಾರಿದ್ದಾರೆ.
ಇದೇ ಕಾರಣಕ್ಕಾಗಿಯೇ ಬಿಜೆಪಿ ಮತ್ತು RSS ನವರು ಸಂವಿಧಾನವನ್ನು ವಿರೋಧಿಸುವ ಮತ್ತು ಸಂವಿಧಾನವನ್ನು ಬದಲಾವಣೆ ಮಾಡುವ ಮಾತುಗಳನ್ನಾಡುತ್ತಾರೆ, ಅದೇ ಹಾದಿಯಲ್ಲಿ ರಾಜಕೀಯವಾಗಿ ಪ್ರಯತ್ನ ನಡೆಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.