ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ (Shiggavi), ಸಂಡೂರು (Sanduru) ಹಾಗೂ ಚನ್ನಪಟ್ಟಣದ (Channapattana) ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು.

ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್ (Yasir Ahmed Khan Patan), ಅನ್ನಪೂರ್ಣ ತುಕಾರಾಮ್ (Annapoorna Tukaram) ಹಾಗೂ ಸಿ.ಪಿ. ಯೋಗೇಶ್ವರ್ (CP Yogeshwar) ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು