ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ (Cm race) ಚರ್ಚೆ ಭಾರೀ ಸದ್ದು ಮಾಡುತ್ತಿದೆ. ಕೇವಲ ವಿಪಕ್ಷಗಳು ಮಾತ್ರವಲ್ಲದೇ..ಕಾಂಗ್ರೆಸ್ (Congress) ಪಕ್ಷದಲ್ಲೂ ಈ ಚರ್ಚೆಗಳು ಜೋರಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ನಾಳೆ (ಜು.23) ಸಿಎಂ ಸಿದ್ದರಾಮಯ್ಯ (Siddaramaiah) ದೆಹಲಿಗೆ ತೆರಳಲಿದ್ದಾರೆ.

ಈ ಹಿನ್ನೆಲೆ ಕೆಲವು ಅಪ್ತ ಸಚಿವರು ಸಿಎಂ ಸಿದ್ದರಾಮಯ್ಯಗೆ ಒಂದಷ್ಟು ಸಲಹೆಗಳನ್ನ ಕೊಟ್ಟಿದ್ದಾರೆ ಎನ್ನಲಾಗಿದೆ.ರಾಜ್ಯದಲ್ಲಿನ ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಬ್ರೇಕ್ ಹಾಕುವಂತೆ ಹೈಕಮಾಂಡ್ ಮೂಲಕ ಎಚ್ಚರಿಕೆ ರವಾನೆ ಮಾಡುವಂತೆ ಮಾಡಿ.ಆಮೂಲ್ಕ 5ವರ್ಷ ನೀವೇ ಸಿಎಂ ಎಂದು ವರಿಷ್ಠರ ಮೂಲಕ ಘೋಷಣೆ ಮಾಡಿಸಿ ಎಂದು ಸಚಿವರು ಹೇಳಿದ್ದಾರಂತೆ.

ಇನ್ನು 2028ರ ಸಾರ್ವತ್ರಿಕ ಚುನಾವಣೆಗೂ ಸಿದ್ದರಾಮಯ್ಯ ನೇತೃತ್ವದಲ್ಲೆ ಕಾಂಗ್ರೆಸ್ ಚುನಾವಣೆಗೆ ಹೋಗಲಿದೆ ಎಂದು ಹೈಕಮಾಂಡ್ ಮೂಲಕ ಸಂದೇಹ ರವಾನಿಸಿ. ನಾಯಕತ್ವ ಬದಲಾವಣೆಯ ಚರ್ಚೆಯಿಂದ ಆಗುತ್ತಿರುವ ಪರಿಣಾಮದ ಬಗ್ಗೆ ವರಿಷ್ಠರಿಗೆ ಮನವರಿಕೆ ಮಾಡಿ ಎಂದು ಸಚಿವರು ಆಗ್ರಹಿಸಿದ್ದಾರೆ.
ಹೀಗೆ ತಮ್ಮ ನಾಯಕತ್ವದ ಬಗ್ಗೆ ಪಕ್ಷದ ಶಾಸಕರು, ಸಚಿವರ ಅಭಿಪ್ರಾಯಗಳನ್ನು ವರಿಷ್ಠರಿಗೆ ತಿಳಿಸಿ ಮನವರಿಕೆ ಮಾಡಿಕೊಡಿ ಎಂದು ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ.ಎನ್ ರಾಜಣ್ಣ, ಸತೀಶ್ ಜಾರಕಿಹೊಳಿ, ಜಮೀರ್ ಸಿಎಂಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.