• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ದೆಹಲಿ ಪ್ರವಾಸ : ಯಾವ ಸಂದೇಶ ಹೊತ್ತು ಬರ್ತಾರೆ ಸಿಎಂ..?

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in Top Story, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ದೆಹಲಿ ಪ್ರವಾಸ : ಯಾವ ಸಂದೇಶ ಹೊತ್ತು ಬರ್ತಾರೆ ಸಿಎಂ..?
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿನ ಕುರ್ಚಿ ಸರ್ಕಸ್‌ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ದೆಹಲಿ(Delhi) ಪ್ರಯಾಣ ಬೆಳೆಸುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ನಾಯಕತ್ವ ಬದಲಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್‌(DCM DK Shivakumar) ಅವರ ಬೇಸರದ ಮಾತುಗಳ ಬಳಿಕ ಸಿಎಂ ದೆಹಲಿ ಭೇಟಿ ಹಲವು ರಾಜಕೀಯ ಸಮೀಕರಣಗಳಿಗೆ ಕಾರಣವಾಗಿದೆ.

ADVERTISEMENT
HD Devegowda On DCM DK Shivakumar | CM-DCM ಕುರ್ಚಿ ಕಚ್ಚಾಟವನ್ನು ರಾಮ-ರಾವಣರ ಯುದ್ಧಕ್ಕೆ ಹೋಲಿಸಿದ

ಕಳೆದೆರಡು ದಿನಗಳ ಹಿಂದಷ್ಟೇ ದೆಹಲಿಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್‌ ಹೈಕಮಾಂಡ್‌ ಭೇಟಿಗೆ ಯತ್ನಿಸಿದರೂ, ಅದು ಸಾಧ್ಯವಾಗಲಿಲ್ಲ. ಹೀಗಾಗಿಯೇ ಪಕ್ಷದ ನಾಯಕತ್ವದ ಬದಲು ಕಾರ್ಯಕರ್ತನಾಗಿರುವುದೇ ಒಳ್ಳೆಯದು ಎಂಬ ಮನಸ್ಥಿತಿಗೆ ಡಿಸಿಎಂ ಬಂದಿದ್ದಾರೆ. ನಾನು ಜೀವನ ಪೂರ್ತಿ ಕಾಂಗ್ರೆಸ್‌ ಕಾರ್ಯಕರ್ತ. ನಾನು ಪಕ್ಷದ ಕೆಲಸಗಾರ, ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲ ಕೆಲಸವನ್ನೂ ಮಾಡಿದ್ದೇನೆ. ಕಾರ್ಯಕರ್ತನಾಗಿ, ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಪೋಸ್ಟರ್‌ ಅಂಟಿಸಿದ್ದೇನೆ. ಸಮಯ ಬಂದಾಗ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದರು.

Shamanuru Shivashankarappa Nudi Namana | ಶಾಮನೂರು ಶಿವಶಂಕರಪ್ಪ ನುಡಿನಮನ ಕಾರ್ಯಕ್ರಮದಲ್ಲಿ ಸಿದ್ದು-ಡಿಕೆ

ನನಗೆ ಆಹ್ವಾನವಿಲ್ಲ ಎಂದಿದ್ದ ಸಿಎಂ

ಇನ್ನು ಮುಖ್ಯವಾಗಿ ಈ ಹಿಂದೆ ನಾನು ಕಾಂಗ್ರೆಸ್‌ ಪಕ್ಷದ ಕಾರ್ಯಕಾರಿಣಿಗೆ ಹೋಗುವುದಿಲ್ಲ. ನನಗೆ ಅದರ ಆಹ್ವಾನ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ ಇಂದು ಸಂಜೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿದ್ದಾರೆ. ಈ ಸಭೆಗೆ ಸಿದ್ದರಾಮಯ್ಯ ಸೇರಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಸೇರಿ ಮೂವರು ಕಾಂಗ್ರೆಸ್‌ ಸಿಎಂಗಳಿಗೆ ಆಹ್ವಾನ ಬಂದಿದೆ.

CM Siddaramaiah Went to Slaps Engineer: ಇಂಜಿನಿಯರ್‌ಗೆ ಹೊಡೆಯಲು ಹೋದ ಸಿಎಂ ಸಿದ್ದರಾಮಯ್ಯ..!! #pratidhvani

ದಿಲ್ಲಿಯಿಂದ ಯಾವ ಸಂದೇಶ ಹೊತ್ತು ಬರ್ತಾರೆ ಸಿದ್ದರಾಮಯ್ಯ..?

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಂಡ ನಂತರ ಹೈಕಮಾಂಡ್‌ ಮೇಜರ್‌ ಸರ್ಜರಿ ಮಾಡುವ ಚರ್ಚೆಗಳು ನಡೆಯುತ್ತಿದ್ದವು. ಆದರೆ ಅದಕ್ಕೂ ಮುನ್ನವೇ ಬಿಹಾರದ ಚುನಾವಣಾ ಫಲಿತಾಂಶ ಕೈ ನಾಯಕರ ಲೆಕ್ಕಚಾರ ತಲೆಕೆಳಗಾಗುವಂತೆ ಮಾಡಿತ್ತು. ಹೀಗಾಗಿ ಕಾಂಗ್ರೆಸ್‌ ದಿಲ್ಲಿ ನಾಯಕರು ಆ ಸಾಹಸಕ್ಕೆ ಕೈ ಹಾಕಲಿಲ್ಲ. ಅದಾದ ಬಳಿಕ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ಗಳ ಮೂಲಕ ಇಬ್ಬರು ನಾಯಕರ ನಡುವಿನ ವೈಮನಸ್ಸು ತಣಿಸುವ ಪ್ರಯತ್ನವನ್ನು ಹೈಕಮಾಂಡ್‌ ಮಾಡಿತ್ತು. ಅದು ಕೇವಲ ಅಷ್ಟಕ್ಕಷ್ಟೇ ಎನ್ನುವಂತಾಗಿ ಬೆಳಗಾವಿ ಅಧಿವೇಶನದ ಸಮಯದಲ್ಲಿ ಡಿಕೆಶಿ ಬಣದ ಶಾಸಕರು ಮತ್ತೆ ನಾಯಕತ್ವದ ಬಗ್ಗೆ ಡಿಸಿಎಂ ಪರವಾಗಿ ಹೇಳಿಕೆ ನೀಡಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳ ಬಳಿಕ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಪಕ್ಷದ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಚರ್ಚಿಸುವ ಸಾಧ್ಯತೆಗಳಿವೆ. ಅಂತಿಮವಾಗಿ ವಾಪಸ್‌ ಬರುವಾಗ ಸಿದ್ದರಾಮಯ್ಯ ಹೈಕಮಾಂಡ್‌ ನಾಯಕರಿಂದ ಯಾವ ಸಂದೇಶ ಹೊತ್ತು ಬರಲಿದ್ದಾರೆ ಅನ್ನೋದನ್ನು ಕಾದು ನೋಡಬೇಕಿದೆ.

Tags: BJPcm siddaramaihcongressCongress Highcommonddcm dk shivkumarKarnatakaKarnataka PoliticsPolitics
Previous Post

ವಿಜಯಲಕ್ಷ್ಮಿ ದೂರಿನ ಪವರ್‌: ಕಮೆಂಟ್‌ ಹಾಕಿದ್ದವರು ಕಂಗಾಲು..!

Next Post

ಚಿತ್ರದುರ್ಗ ಬಸ್‌ ದುರಂತ: ಸೀಬರ್ಡ್ ಸಂಸ್ಥೆ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ಚಿತ್ರದುರ್ಗ ಬಸ್‌ ದುರಂತ: ಸೀಬರ್ಡ್ ಸಂಸ್ಥೆ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌

ಚಿತ್ರದುರ್ಗ ಬಸ್‌ ದುರಂತ: ಸೀಬರ್ಡ್ ಸಂಸ್ಥೆ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!