ದೇಶವೇ ಹಮ್ಮೆ ಪಡುತ್ತಿರುವ ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ( Chandrayaan-3 Soft Landing ) ಯಶಸ್ವಿಯಾಗಿರುವ ( Success ) ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ( ISRO Scientist ) ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah ) ಅವರು ಇಂದು ಇಸ್ರೋಗೆ ಭೇಟಿ ನೀಡಿ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಇಸ್ರೋನ ಇಸ್ಟ್ರಾಕ್ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ, ಸಚಿವ ಬೋಸರಾಜು ಮೊದಲಾದವರು ಭೇಟಿ ನೀಡಲಿದ್ದಾರೆ.
ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ನಿರ್ವಹಿಸಿದ ಇಸ್ರೋ ಟೆಲಿಮೆಂಟರಿ ಟ್ರಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ ಕೇಂದ್ರಕ್ಕೆ ಬೆಳೆಗೆ 10:30 ಕ್ಕೆ ಭೇಟಿ ನೀಡಿ ವಿಜ್ಞಾನಿಗಳ ಮುಖ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಚಂದ್ರಯಾನ ಯಶಸ್ವಿಯಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ವಿಜ್ಞಾನಿಗಳನ್ನು ಅಭಿನಂದಿಸಿದ್ದು, ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ.
ಈ ಸುದ್ದಿಯನ್ನು ಓದಿದ್ದೀರಾ ? ; ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ನಿರ್ಮಾಣಕ್ಕೆ ಮುಂದೆ ಬಂದ ಲೈಕಾ ಪ್ರೊಡಕ್ಷನ್ಸ್.
ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.