ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಇಂದು ಚಿಕ್ಕಮಗಳೂರಿ(Chikkamagalore)ಗೆ ಆಗಮಿಸಲಿದ್ದು,ಜಿಲ್ಲಾಡಳಿತ ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಾ.3 ರಂದು ಜಿಲ್ಲಾ ಆಟದ ಮೈದಾನದಲ್ಲಿ ಹಮ್ಮಿಕೊಂಡಿರುವ ಬೃಹತ್ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಲಿರುವ ಮುಖ್ಯಮಂತ್ರಿಗಳು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡುವರು. ಮುಖ್ಯಮಂತ್ರಿಯವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಮುಖ್ಯ ವೇದಿಕೆ, ಆಸನ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ಸೇರಿದಂತೆ ಕಾರ್ಯಕ್ರಮಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದಿರುವ ಸಚಿವ ಕೆ.ಜೆ. ಜಾರ್ಜ್(KJ Gorge), ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
#Siddaramaih #CMofKarnataka #Chikkamagalore #KJGorge #Minister