• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಫೀಲ್ಡ್​ ವರ್ಕ್​ ಮಾಡಿ, ಕೈ ಬೀಸಿಕೊಂಡು ಬರಬೇಡಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​

Any Mind by Any Mind
June 10, 2023
in ಕರ್ನಾಟಕ
0
ಫೀಲ್ಡ್​ ವರ್ಕ್​ ಮಾಡಿ, ಕೈ ಬೀಸಿಕೊಂಡು ಬರಬೇಡಿ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​
Share on WhatsAppShare on FacebookShare on Telegram

ಮೈಸೂರು, ಜೂನ್ 10: ಮುಂಗಾರು ಆರಂಭವಾಗುತ್ತಿದ್ದಂತೆ ಕೃಷಿ ಚಟುವಟಿಕೆ ಚುರುಕಾಗುತ್ತದೆ. ಇದಕ್ಕೆ ತಕ್ಕಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಿ. ಲೋಪಗಳಾದರೆ ನೀವೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ವರಿಕೆ ನೀಡಿದರು.

ADVERTISEMENT

ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸೂಚನೆಗಳನ್ನು ನೀಡಿದರು.

ನಾಡಿನ ಜನತೆ ಬದಲಾವಣೆ ಬಯಸಿ ಸರ್ಕಾರವನ್ನು ಬದಲಾಯಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ದಕ್ಷವಾಗಿ, ಚುರುಕಾಗಿ ಕೆಲಸ ಮಾಡಿ. ಹೆಚ್ಚೂ ಕಡಿಮೆ ಆದರೆ ನಿಮ್ಮಗಳ ಮೇಲೆ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ. ಕೆಡಿಪಿ ಸಭೆಗಳಿಗೆ ಸಂಪೂರ್ಣ ಫೀಲ್ಡ್ ವರ್ಕ್ ಮಾಡಿದ ವರದಿ ಸಮೇತ ಸಮಗ್ರ ಮಾಹಿತಿಯೊಂದಿಗೆ ಬರಬೇಕು. ಕೈ ಬೀಸಿಕೊಂಡು ಬರಬಾರದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಕೃಷಿ ಕೆಲಸ ಇದ್ದಾಗ ರೈತರನ್ನು ಕಚೇರಿಗಳಿಗೆ ಅಲೆಯುವಂತೆ ಮಾಡಬೇಡಿ. ಬೀಜ, ಗೊಬ್ಬರ, ಕೀಟನಾಶಕ ಅಗತ್ಯ ಪ್ರಮಾಣದಲ್ಲಿ ಶೇಖರಿಸಿ ಇಟ್ಟುಕೊಂಡು ರೈತರಿಗೆ ನೆರವಾಗಿ. ಯಾವುದಕ್ಕೂ ಹಣದ ಕೊರತೆ ಇಲ್ಲ. ನಿಮ್ಮಲ್ಲಿ ಕೊರತೆ ಇದ್ದರೆ ನಮಗೆ ಕೇಳಿ. ನಿಮ್ಮಿಂದ ಏನೇ ಲೋಪ ಆಗಿ ಬೆಳಗಳಿಗೆ ಮತ್ತು ರೈತರಿಗೆ ತೊಂದರೆ ಆದರೆ ನಿಮ್ಮನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಕುಡಿಯುವ ನೀರಿಗೆ ಪ್ರಥಮ ಆಧ್ಯತೆ ನೀಡಬೇಕು. ಕೊರತೆಯನ್ನು ಮೊದಲೇ ಅಂದಾಜಿಸಿ ಅಗತ್ಯ ನೆರವಿನ ನೀಲನಕ್ಷೆ ಸಿದ್ದಪಡಿಸಿಕೊಳ್ಳಿ. ನಿಮ್ಮ ಲೋಪದಿಂದ ಜನರಿಗೆ ಸಮಸ್ಯೆ‌ ಆದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಜಿಲ್ಲೆಯ ಎಲ್ಲಾ ಶಾಸಕರುಗಳು ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳು ಕೊಟ್ಟ ಸೂಚನೆಗಳು…

  • ಕೆಡಿಪಿ ಸಭೆಗಳಿಗೆ ಒಂದು ದಿನ ಮುಂಚಿತವಾದರೂ ವರದಿಗಳನ್ನು ನೀಡಬೇಕು.
  • ಅಧಿಕಾರಿಗಳು ಕಡ್ಡಾಯವಾಗಿ ಫೀಲ್ಡ್ ವರ್ಕ್ ಮಾಡಬೇಕು.
  • ಬರೀ ಕಚೇರಿಯಲ್ಲಿ ಕುಳಿತು ವರದಿ ಸಿದ್ದಪಡಿಸಬಾರದು.
  • ಎಸ್ ಪಿ ಗಳು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
  • ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಬಿಗಿಯಾಗಿದ್ದರೆ ನಿಮ್ಮ ಕೆಳಗಿನ ಅಧಿಕಾರಿಗಳು ಜವಾಬ್ದಾರಿಯಿಂದ ಇರುತ್ತಾರೆ. ನೀವೇ ಮೈಗಳ್ಳರಾದರೆ ಕೆಳಗಿನವರು ಸೋಮಾರಿಗಳಾಗುತ್ತಾರೆ.
  • ಠಾಣಾಧಿಕಾರಿ ಗಮನಕ್ಕೆ ಬಾರದಂತೆ ಠಾಣೆ ವ್ಯಾಪ್ತಿಯಲ್ಲಿ ರೌಡಿ ಚಟುವಟಿಕೆ, ಅಕ್ರಮ ಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ.
  • ಪೊಲೀಸರ ಬಗ್ಗೆ ರೌಡಿಗಳಿಗೆ ಭಯ ಇಲ್ಲದಿದ್ದರೆ ಪೊಲೀಸರು ಇದ್ದರೇನು, ಬಿಟ್ಟರೇನು?
  • ತಹಶೀಲ್ದಾರ್ ಕಚೇರಿಗಳಲ್ಲಿ ಎಷ್ಟು ಲಂಚ ನಡೆಯುತ್ತಿದೆ, ರೈತರಿಗೆ ಎಷ್ಟು ಗೋಳಾಡಿಸುತ್ತಿದ್ದಾರೆ ಎನ್ನುವುದು ಗೊತ್ತಾ ಜಿಲ್ಲಾಧಿಕಾರಿಗಳೇ ?
  • ಕಳೆದ ವರ್ಷ ಬೆಳೆ ಹಾನಿ ಆದ ಎಲ್ಲರಿಗೂ ಸಮರ್ಪಕವಾಗಿ ಪರಿಹಾರ ವಿತರಿಸಬೇಕು.
  • ತಾಂತ್ರಿಕ ಸಮಸ್ಯೆ ಕಾರಣದಿಂದ ಯಾರಿಗಾದರೂ ಪರಿಹಾರ ದೊರಕದಿದ್ದರೆ, ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ ಪರಿಹಾರ ವಿತರಿಸಿ.
  • ಗುಣಮಟ್ಟದ ಬೀಜ ಮತ್ತು ಅಗತ್ಯ ರಸಗೊಬ್ಬರ ಸಂಗ್ರಹ ಇರಬೇಕು.
  • ಜೂನ್ ಆರಂಭದಲ್ಲಿ ಬರಬೇಕಾದ ಮಳೆ ಬಂದಿಲ್ಲ. ಇದರಿಂದ ಕುಡಿಯುವ ನೀರು ಮತ್ತು ಬೆಳೆಗೆ ನೀರು ಕೊರತೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿ.
  • ಮಳೆ ಬರುವವರೆಗೆ ಬೆಳೆಗಳಿಗೆ ಅಗತ್ಯ ನೀರು ಒದಗಿಸಿ, ಬೆಳೆ ನಷ್ಟ ಆಗದಂತೆ ಕ್ರಮ ವಹಿಸಿ. ಪ್ರಥಮ ಆಧ್ಯತೆ ಕುಡಿಯುವ ನೀರಿಗೆ ಒದಗಿಸಿ.
  • ಪ್ರತಿ ದಿನ ನೀರಿನ ಪ್ರಮಾಣದ ಮೇಲೆ ನಿಗಾ ವಹಿಸಿ. ಕುಡಿಯುವ ನೀರಿಗೆ ಕೊರತೆ ಆಗದಂತೆ ಸಿದ್ಧತೆ ಮಾಡಿಕೊಳ್ಳಿ.

ಗ್ಯಾರಂಟಿಗಳನ್ನು ಬಡವರಿಗೆ-ಮಧ್ಯಮ ವರ್ಗದವರಿಗೆ ತಲುಪಿಸಿ
ನಮ್ಮ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಅವರ ಸಂಕಷ್ಟ ಕಡಿಮೆ ಆಗಲಿ ಎಂದು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಆದ್ದರಿಂದ ಅತ್ಯಂತ ಕಾಳಜಿ ವಹಿಸಿ ಹೆಚ್ಚಿನ ಕಾರ್ಯಕ್ಷಮತೆಯಿಂದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿ ಎಂದು ಖಡಕ್ ಸೂಚನೆ ನೀಡಿದರು.

Tags: CM Siddaramaiahdistrict level officialsMysoreVarunaಕಾಂಗ್ರೆಸ್​ಜಿಲ್ಲಾ ಮಟ್ಟದ ಅಧಿಕಾರಿಗಳುಮೈಸೂರುವರುಣಸಿಎಂ ಸಿದ್ದರಾಮಯ್ಯ
Previous Post

ರಾಮನಂತೆ ಕಾಣುವ ಯಶ್​ಗೆ ರಾವಣನ ಪಾತ್ರವೇಕೆ ಎಂದು ಪ್ರಶ್ನಿಸಿದ ಕಂಗನಾ

Next Post

ಝೀರೋ ಟ್ರಾಫಿಕ್​ ಮಾಡಿಸಿದ ಮೈಸೂರು ಕಮಿಷನರ್​ಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್​

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿನೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿನೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಝೀರೋ ಟ್ರಾಫಿಕ್​ ಮಾಡಿಸಿದ ಮೈಸೂರು ಕಮಿಷನರ್​ಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್​

ಝೀರೋ ಟ್ರಾಫಿಕ್​ ಮಾಡಿಸಿದ ಮೈಸೂರು ಕಮಿಷನರ್​ಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada