• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ಉದ್ಯೋಗ ಸಿಕ್ಕ ಬಳಿಕ ಮಾತ್ರ ಅವರ ಯುವನಿಧಿ ನಿಲ್ಲಿಸ್ತೀವಿ: ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
October 17, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಉದ್ಯಮಿಗಳು-ಉದ್ಯೋಗಾಕಾಂಕ್ಷಿಗಳು ಒಂದೇ ಸೂರಿಗೆ ಬಂದಿದ್ದಾರೆ, ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ: ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ.
ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ: ಪ್ರತೀ ಜಿಲ್ಲೆಯಲ್ಲಿ ಉದ್ಯೋಗ ಮೇಳ: ಸಿ.ಎಂ.ಸಿದ್ದರಾಮಯ್ಯ(CM Siddaramaiah)

ADVERTISEMENT

ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯ‌ಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತೆ ಸ್ಪಷ್ಟಪಡಿಸಿದರು. ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ಯುವ ಸಮೃದ್ಧಿ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷದಲ್ಲಿ 22 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು ಸುಳ್ಳು ಹೇಳಿದರು. ನಾವು ಅವರಂತೆ ಸುಳ್ಳು ಹೇಳುವುದಿಲ್ಲ ಎಂದು ಸರ್ಕಾರದಿಂದ ಭರ್ತಿಯಾದ ಹುದ್ದೆಗಳ ಮತ್ತು ಉದ್ಯೋಗ ಮೇಳದಲ್ಲಿ ಭರ್ತಿಯಾದ ಹುದ್ದೆಗಳ ವಿವರಗಳನ್ನು ನೀಡಿದರು.

ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ‌ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58892 ಮಂದಿ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22819 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ವಿವರಿಸಿದರು. ಜಿಲ್ಲೆಗಳಲ್ಲಿ ನಡೆದ ಉದ್ಯೋಗ ಮೇಳದಲ್ಲಿ 120563 ಅಭ್ಯರ್ಥಿಗಳು ಭಾಗವಹಿಸಿ, 24391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 48232 ಅಭ್ಯರ್ಥಿಗಳ ಹೆಸರನ್ನು short list ಮಾಡಲಾಗಿದೆ ಎಂದು ಪಟ್ಟಿ ನೀಡಿದರು.

ಹಿಂದಿನ ಸರ್ಕಾರ ಉದ್ಯೋಗಾಕಾಂಕ್ಷಿಗಳನ್ನು ಸಂಪೂರ್ಣ ನಿರ್ಲಕ್ಷಿಸಿತ್ತು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು. ಉದ್ಯಮಗಳ ಬೇಡಿಕೆಗೆ ತಕ್ಕಂತೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಸೃಷ್ಟಿಸುವ ಮಹತ್ತರ ಕಾರ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

Tags: c m siddaramaiahCM Siddaramaiahcm siddaramaiah budgetcm siddaramaiah cabinetcm siddaramaiah dancecm siddaramaiah dasaracm siddaramaiah latest newscm siddaramaiah livecm siddaramaiah newscm siddaramaiah patriotic momentcm siddaramaiah press meetcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah videokarnataka cm siddaramaiahkarnataka next cm siddaramaiahSiddaramaiah CMsiddaramaiah karnataka cm
Previous Post

CM Siddaramaiah: ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ..!!

Next Post

CM Siddaramaiah: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ: ಸಿಎಂ ವಿಶ್ವಾಸ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ರಾಜಕೀಯ ಮೀಸಲಾತಿ ಮತ್ತು ಪ್ರಾತಿನಿಧಿಕ ಅವಕಾಶಗಳು

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
Next Post

CM Siddaramaiah: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ: ಸಿಎಂ ವಿಶ್ವಾಸ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada