• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ : ಕೇಂದ್ರಕ್ಕೆ ಸಿಎಂ ಪತ್ರ

ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ ಎಂದ ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
March 10, 2026
in Top Story, Uncategorized, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ : ಕೇಂದ್ರಕ್ಕೆ ಸಿಎಂ ಪತ್ರ
Share on WhatsAppShare on FacebookShare on Telegram

ಬೆಂಗಳೂರು : ನಗರದಲ್ಲಿ ಸಾವಿರಾರು ಸಣ್ಣ ಹೋಟೆಲ್‌ಗಳು, ಮೆಸ್ಸುಗಳು ಮತ್ತು ಕೇಟರಿಂಗ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿದಿನ ಲಕ್ಷಾಂತರ ಜನರು ಇವುಗಳ ಮೇಲೆ ಅವಲಂಬಿತರಿದ್ದಾರೆ. ಕೂಡಲೇ ಎಲ್‌ಪಿಜಿ ಪೊರೈಸಲು ಕ್ರಮ ಕೈಗೊಳ್ಳಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಮನವರಿಕೆ ಮಾಡಿದ್ದಾರೆ.

ADVERTISEMENT
🔴LIVE : ವಿಧಾನಸಭೆ ಬಜೆಟ್‌ ಅಧಿವೇಶನ ನೇರಪ್ರಸಾರ..! #pratidhvani

ಈ ಕುರಿತು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್‌ ಸಿಂಗ್‌ ಪುರಿಯವರಿಗೆ ತುರ್ತು ಪತ್ರ ಬರೆದು ಅನಿಲ ಪೊರೈಕೆಯಲ್ಲಿ ವ್ಯತ್ಯಯವಾಗಬಾರದೆಂದು ಆಗ್ರಹಿಸಿದ್ದಾರೆ.

ಬೆಂಗಳೂರಿನಂತಹ ವಿದ್ಯಾರ್ಥಿಗಳು ಹಾಗೂ ಉದ್ಯೋಗಕ್ಕಾಗಿ ಹೊರನಗರಗಳಿಂದ ಬಂದಿರುವ ಅನೇಕರು ದಿನನಿತ್ಯದ ಆಹಾರಕ್ಕಾಗಿ ಇಂತಹ ಹೋಟೆಲ್ ಮತ್ತು ಮೆಸ್ಸುಗಳನ್ನೇ ನಂಬಿಕೊಂಡಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ ಎಂದು ಸಂಕಷ್ಟ ಹೊರಹಾಕಿದ್ದಾರೆ.

May be an image of text

ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಮಾರ್ಚ್ 9, 2026 ರಂದು ಹೊರಡಿಸಿದ್ದ ಪರಿಷ್ಕೃತ ಆದೇಶದಂತೆ, ಎಲ್‌ಪಿಜಿ ಉತ್ಪಾದನೆಯಲ್ಲಿ ಗೃಹಬಳಕೆಯ ಗ್ರಾಹಕರಿಗೆ (Domestic Consumers) ಪ್ರಮುಖ ಆದ್ಯತೆ ನೀಡುವಂತೆ ತೈಲ ಮಾರುಕಟ್ಟೆ ಕಂಪನಿಗಳಿಗೆ (OMCs) ಸೂಚಿಸಲಾಗಿದೆ. ಹೀಗಾಗಿ ಈ ರೀತಿಯ ಬಿಕ್ಕಟ್ಟು ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಐದು ಗ್ಯಾರಂಟಿಗಳನ್ನು ಘೋಷಿಸಿದ ರಾಹುಲ್ ಗಾಂಧಿ: ಅದು ಯಾವವು ?

ಬೆಂಗಳೂರಿನಲ್ಲಿ ಲಕ್ಷಾಂತರ ಜನರಿಗೆ ದಿನಾಲೂ ಆಹಾರ ನೀಡುವ ಸಣ್ಣ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಮೆಸ್ ಮತ್ತು ಕ್ಯಾಟರಿಂಗ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಇಲ್ಲದೆ ಹೋಟೆಲ್‌ಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಈ ಬಿಕ್ಕಟ್ಟನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

May be an image of text

ಈ ಸಮಸ್ಯೆ ಬರೀ ಹೋಟೆಲ್ ಮಾಲೀಕರದ್ದಷ್ಟೇ ಅಲ್ಲ, ಬದಲಿಗೆ ಬೆಂಗಳೂರಿನಲ್ಲಿ ವಾಸಿಸುವ ಸಾವಿರಾರು ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು ನಿತ್ಯ ಹೋಟೆಲ್ ಹಾಗೂ ಮೆಸ್ ಆಹಾರವನ್ನೇ ಅವಲಂಬನೆ ಮಾಡಿದ್ದಾರೆ. ಜೊತೆಗೆ, ವಿವಾಹಗಳ ಸೀಸನ್‌ ಆಗಿರುವುದರಿಂದ ಕಲ್ಯಾಣ ಮಂಟಪಗಳು (Choultries) ಮತ್ತು ಸಮುದಾಯ ಭವನಗಳಲ್ಲೂ ಆಹಾರ ತಯಾರಿಕೆಗೆ ಸಮಸ್ಯೆಯಾಗುತ್ತಿದೆ. ಇದು ಸಾರ್ವಜನಿಕ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಹಲವು ಹೋಟೆಲ್ ಸಂಘಟನೆಗಳು ಸರ್ಕಾರಕ್ಕೆ ಈ ಬಗ್ಗೆ ದೂರು ನೀಡಿದ್ದು, ಪೂರೈಕೆಯಲ್ಲಿನ ಅಡೆತಡೆಗಳು ಶೀಘ್ರವೇ ದೂರವಾಗದಿದ್ದರೆ ಹೋಟೆಲ್‌ಗಳು ಹಾಗೂ ಉದ್ಯಮ ತಾತ್ಕಾಲಿಕವಾಗಿ ಮುಚ್ಚಬೇಕಾದ ಸ್ಥಿತಿಗೆ ತಲುಪಬಹುದು ಎಂದು ಸಂಘಟನೆಗಳು ಆತಂಕ ಹೊರಹಾಕಿದ್ದು, ಈ ಎಲ್ಲ ಸಮಸ್ಯೆಗಳನ್ನು ಗಮನಿಸಿ ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕೆಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Tags: Commercial Use LPGGovernment of IndiaHardip Singh puriHotel BussinessHotelsiran israel war conflictsLPGLPG Domestic GasLPG Gas PriceLPG SubsidyNatural GasPetroleum and Natural Gas ministerPratidhvaniRestaurantsStrait Of Hormuz
Previous Post

LPG ಬೆಲೆ ಏರಿಕೆಯ ಬಗ್ಗೆ ಈಗ ಮಾತಾಡಲಿ : ಬಿಜೆಪಿ ಸಂಸದರ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ..

Next Post

“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
“ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ”

"ನನಗಿಂತ ಕಿರಿಯ ಶಿವಕುಮಾರ್‌ಗೆ ಉಜ್ವಲ ರಾಜಕೀಯ ಭವಿಷ್ಯವಿದೆ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada