ಈ ಬಾರಿಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನವರು ವೈದ್ಯಕೀಯ ಶಿಕ್ಷಣಕ್ಕೆ ( Medical education ) ಹೆಚ್ಚು ಒತ್ತು ಕೊಟ್ಟಿದ್ದಾರೆ.. ವೈದ್ಯಕೀಯ ಶಿಕ್ಷಣ ಇಲಾಖೆಯ ಬಲಪಡಿಸುವ ನಿಟ್ಟಿನಲ್ಲಿ 177 ಕೋಟಿ ರೂ. ಮೊತ್ತದಲ್ಲಿ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ಗಳನ್ನು ಸ್ಥಾಪಿಸಲಾಗಿದೆ ಘೋಷಿಸಿದ್ದಾರೆ.

ಗದಗ ಮೆಡಿಕಲ್ ಕಾಲೇಜಿನಲ್ಲಿ ( Gadag Medical College ) ಕ್ಯಾಥ್ಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಹೃದಯ ಚಿಕಿತ್ಸಾ ಘಟಕವನ್ನು10 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುತ್ತದೆ. ಕಲಬುರಗಿಯಲ್ಲಿ 92 ಕೋಟಿ ರೂ. ವೆಚ್ಚದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಹಾಗೂ 304 ಕೋಟಿ ರೂ. ವೆಚ್ಚದ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. 26 ಕೋಟಿ ರೂ. ವೆಚ್ಚದ ಬೆಂಗಳೂರಿನನೆಫ್ರೊ-ಯುರಾಲಾಜಿ ಸಂಸ್ಥೆಯ ( Bangalore Nephro-Urology ) ಕಟ್ಟಡವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಅನುವು ಮಾಡಿಕೊಡಲಾಗುತ್ತದೆ.
ಇನ್ನು ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜು ( Rajiv Gandhi University Medical College ) ಹಾಗೂ ಕೋಲಾರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜನ್ನು ಆರಂಭಿಸಲಾಗುತ್ತೆ ಎಂದು ತಿಳಿಸಿದ್ದರು. ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ..
2025-26ನೇ ಸಾಲಿನಲ್ಲಿ ಸಾರ್ವಜನಿಕರಿಗೆ ಸುಧಾರಿತ ಆರೋಗ್ಯ ಸೇವೆಯನ್ನು ಒದಗಿಸಲು ಹೊಸ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು, ರಾಜ್ಯದ 22 ವೈದ್ಯಕೀಯ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಮಾನವ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್ಗಳನ್ನು ಪ್ರಾರಂಭ ಮಾಡಲಾಗುತ್ತದೆ ಎಂದು
ಹೇಳಿದ್ದಾರೆ.
ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮೈಸೂರು ಮತ್ತು ಕಲಬುರಗಿ( Kalburagi ) ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ (Endocrinology) ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುತ್ತದೆ.
ಕೊಪ್ಪಳ ( Koppala ) ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುತ್ತದೆ. ರಾಯಚೂರಿನ ( Rayachuru ) ರಾಜೀವ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫರೆಲ್ ಕ್ಯಾನ್ಸರ್ ಚಿಕಿತ್ಸಾ ಘಟಕ, ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ಆರು ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನರ್ಸಿಂಗ್ ಕಾಲೇಜುಗಳನ್ನು KKRDB ಅನುದಾನದಲ್ಲಿ ಆರಂಭಿಸಲಾಗುತ್ತದೆ ಎಂದು ಬಜೆಟ್ ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು