ಬೆಂಗಳೂರು : ಸಿ.ಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು.ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಸೆಪ್ಟೆಂಬರ್.2ರ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ನಡೆಸಲಿದೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30 ಕ್ಕೆ ಹೈಕೋರ್ಟ್ ನಡೆಸಲಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸಲಿದೆ.