ಪಂಚಮಸಾಲಿಗಳಿಗೆ ಮೀಸಲಾತಿ ಕೊಡ್ತಿಲ್ಲ, ಸಿದ್ದರಾಮಯ್ಯ ಪಂಚಮಸಾಲಿ ಲಿಂಗಾತರ ವಿರೋಧಿ ಎಂದು ಬಿಜೆಪಿ ಶಾಸಕರು ಟೀಕಾಪ್ರಹಾರ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿರುವ ಲಿಂಗಾಯತ ಶಾಸಕರೂ ಕೂಡ ಮೀಸಲಾತಿ ವಿಚಾರದಲ್ಲಿ ಬಹಿರಂಗವಾಗಿ ಏನನ್ನೂ ಹೇಳಲು ಆಗದೆ ಸುಮ್ಮನಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ವಸ್ತುಸ್ಥಿತಿ ತಿಳಿಸಲು ಮುಂದಾಗಿದ್ದಾರೆ.
ಡಿಸೆಂಬರ್ 21 ರಂದು ಶನಿವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿರುವ ಸಿಎಂ ಸಿದ್ದರಾಮಯ್ಯ, ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಎಲ್ಲಾ ಪಕ್ಷದ ಶಾಸಕರ ಜೊತೆ ಮಾತುಕತೆ ನಡೆಸಲಿದ್ದಾರೆ. 2A ಮೀಸಲಾತಿ ಕಾನೂನಿನ ಅಡಿಯಲ್ಲಿ ನೀಡಲು ಬರುವುದಿಲ್ಲ. 2ಡಿ ಮೀಸಲಾತಿ ವಿಚಾರ ಕೋರ್ಟ್ನಲ್ಲಿ ಪ್ರಕರಣ ಇದೆ ಅನ್ನೋದನ್ನು ಮನವರಿಕೆ ಮಾಡಿಕೊಡಲಿದ್ದಾರೆ.
ಪರಿಸ್ಥಿತಿ ಹೀಗಿರುವಾಗ ಮುಂದೇನು ಮಾಡಬೇಕು, ಮೀಸಲಾತಿ ನೀಡಲು ಏಕೆ ಸಾಧ್ಯವಿಲ್ಲ. ಕಾನೂನು ಮತ್ತು ಕೋರ್ಟ್ ತೀರ್ಪುಗಳು ಏನೆಲ್ಲ ಇದೆ ಅನ್ನೋ ವಿಷಯಗಳ ಬಗ್ಗೆ ಶಾಸಕರಿಗೆ ಮನದಟ್ಟು ಮಾಡಿಕೊಲಿದ್ದಾರೆ ಎನ್ನಲಾಗಿದೆ. ಜೊತೆಗೆ ಪಂಚಮಸಾಲಿ ಸಮುದಾಯದ ಶಾಸಕರ ಅಭಿಪ್ರಾಯ ಪಡೆದು ಪರ್ಯಾಯ ತೀರ್ಮಾನ ಮಾಡುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.