ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವರುಣ ಕ್ಷೇತ್ರದ ಕಾಂಗ್ರೆಸ್ ಕೃತಜ್ಞತೆ ಸಭೆಯಲ್ಲಿ ಭಾಗವಹಿಸಿ ಮಾಜಿ ಶಾಸಕ ಡಾ ಯತೀಂದ್ರ ಸಿದ್ಧರಾಮಯ್ಯ ಭಾ಼ಷಣ ಮಾಡಿದ್ರು. ಈ ವೇಳೆ ಕಮಲ ಕಲಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ರು.ವರುಣ ಕ್ಷೇತ್ರದಲ್ಲಿ ಈ ಬಾರಿ ಸಿದ್ದರಾಮಯ್ಯ ಅವರು 46 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಇದಕ್ಕೆ ಪಕ್ಷದ ಕಾರ್ಯಕರ್ತರು ಮುಖಂಡರು ಹಗಲಿರುಳೆನ್ನದೇ, ಮಳೆ ಬಿಸಿಲನ್ನು ಲೆಕ್ಕಿಸದೇ ದುಡಿದಿದ್ದು ಕಾರಣವಾಗಿದೆ.ಎಲ್ಲರ ಸಹಕಾರದಿಂದಾಗಿ ಅತ್ಯಂತ ವ್ಯವಸ್ಥಿತವಾಗಿ ಚುನಾವಣೆ ಎದುರಿಸಲು ಸಾಧ್ಯವಾಯಿತು.

ನನ್ನ ತಂದೆಯ ಗೆಲುವಿನ ಶ್ರೇಯಸ್ಸು ಪಕ್ಷದ ನಾಯಕರಿಗೆ, ಕಾರ್ಯಕರ್ತರಿಗೆ ಸಲ್ಲಬೇಕು.ಚುನಾವಣೆಯಲ್ಲಿ ಗೆದ್ದ ನಂತರ ಬೀಗುವ ಅಗತ್ಯವಿಲ್ಲ.ಏಕೆಂದರೆ ಚುನಾವಣೆ ಪೂರ್ವದಲ್ಲಿ ಭರವಸೆಗಳನ್ನು ನೀಡಿದ್ದೇವೆ.ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 59 ಸಾವಿರ ಕೋಟಿ ಹಣದ ಅಗತ್ಯವಿದೆ. ಕಾಂಗ್ರೆಸ್ ಕೊಟ್ಟ ಮಾತು ಉಳಿಸಿಕೊಂಡಿದೆ ಅಂತ ಹೇಳಿದ್ರು.ಇಷ್ಟೊಂದು ಹಣವನ್ನು ಹೊಂದಿಸುವುದು ಸವಾಲಿನ ಕೆಲಸವಾಗಿದೆ.ಸವಾಲಿನ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಅವರು ನೆರವೇರಿಸುವ ವಿಶ್ವಾಸವಿದೆ.ಅನ್ನ ಭಾಗ್ಯ ಯೋಜನೆಯನ್ನು ವಿಫಲಗೊಳಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ.ಅನ್ನಭಾಗ್ಯಕ್ಕೆ ಅಗತ್ಯವಿರುವ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ಒಪ್ಪಿಗೆ ಸೂಚಿಸಿತ್ತು.ಆದರೆ ಯೋಜನೆ ಜಾರಿಗೊಳಿಸಲು ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಅಕ್ಕಿ ಕೊಡುವುದಿಲ್ಲ ಎಂದು ಹೇಳಿದ್ದಾರೆ.ಬಿಜೆಪಿ ಅತ್ಯಂತ ಕೀಳು ಮಟ್ಟದ ರಾಜಕಾರಣ ಮಾಡಿದೆ.ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಪಪ್ರಚಾರ ಮಾಡಿ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ ಎಂದು1 ಯತೀಂದ್ರ ವಾಗ್ದಾಳಿ ನಡೆಸಿದ್ರು.

ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವಂತೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಮುಖಂಡರು ಕಾರ್ಯಕರ್ತರು ಶ್ರಮಿಸಬೇಕು. ಬಿಜೆಪಿ ದುರಾಡಳಿತಕ್ಕೆ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಲಿದೆ. ಕಾರ್ಯಕರ್ತರು ಲೋಕಸಭೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಹೆಚ್ಚು ಶ್ರಮಿಸಬೇಕು ಅಂತ ಕರೆಕೊಟ್ಟರು.