ತುಮಕೂರು(Tumakuru): ಜಿಲ್ಲೆಯ ಕುಣಿಗಲ್ ಪಟ್ಟಣಕ್ಕೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ಆಗಮಿಸುತ್ತಿದ್ದಾರೆ.
ಸಿದ್ದರಾಮಯ್ಯ ಅವರು ಸರ್ಕಾರದ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಒಟ್ಟು 1,600 ಕೋಟಿ ರೂ. ವೆಚ್ಚದ ಕಾರ್ಯಕ್ರಮ ಜಾರಿ ಆಗಲಿದೆ.
ಕುಣಿಗಲ್ ಪಟ್ಟಣದ GKBMS ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ 25 ಸಾವಿರಕ್ಕೂ ಹೆಚ್ಚು ಜನರು ಸೇರಲಿದ್ದಾರೆ ಎನ್ನಲಾಗುತ್ತಿದೆ.
ವಿವಾದಿತ ಯೋಜನೆಯಾದ ಲಿಂಕಿಂಗ್ ಕೆನಾಲ್ ಯೋಜನೆಗೂ ಸಿಎಂ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ (DKShivakumar) ಹಾಗೂ ಸಂಸದ ಡಿ.ಕೆ ಸುರೇಶ್ (DKSuresh) ಕೂಡ ಭಾಗಿಯಾಗಲಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕುಣಿಗಲ್ ಕ್ಷೇತ್ರದ ಮತಗಳನ್ನು ಡಿ.ಕೆ ಸುರೇಶ್ ಕಡೆಗೆ ಸೆಳೆಯಲು ಈ ಅಭಿವೃದ್ಧಿ ಯೋಜನೆಗಳು ಸಹಕಾರಿಯಾಗಲಿದೆ ಎನ್ನಲಾಗುತ್ತಿದೆ.
ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಿದ್ದಾರೆ. ಕುಣಿಗಲ್ ಶಾಸಕ ಡಾ.ರಂಗನಾಥ್ ತಾಲೂಕಿನ ಜನತೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.
#karnataka #tumakuru #siddaramaiah #dksuresh #congress