ಇಂದು ದಾಖಲೆಯ 16 ನೇ ಬಜೆಟ್ ಮಂಡನೆ (16th budget) ಮಾಡಿರುವ ಸಿಎಂಸಿದ್ದರಾಮಯ್ಯ (Cm siddaramaiah) ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಟಕ್ಕರ್ ಕೊಟ್ಟಿದ್ದಾರೆ.
GST ಜಾರಿಯಿಂದ ರಾಜ್ಯಕ್ಕೆ ಆದ ರಾಜಸ್ವ ನಷ್ಟ ಸಂಪೂರ್ಣವಾಗಿ ಸರಿದೂಗಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. 15 ನೇ ಹಣಕಾಸು ಆಯೋಗದ ಶಿಫಾರಸ್ಸಿನನ್ವಯ ರಾಜ್ಯದ ತೆರಿಗೆ ಪಾಲು ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ನೀತಿಯಿಂದ ರಾಜ್ಯವು ವಿತ್ತೀಯ ಕೊರತೆ ಎದುರಿಸುವಂತಾಯಿತು.ತೆರಿಗೆ ಹಂಚಿಕೆಯಲ್ಲಿ ಅತೀ ಹೆಚ್ಚು ನಷ್ಟವನ್ನು ರಾಜ್ಯ ಅನುಭವಿಸಿದೆ.ತೆರಿಗೆ ಹಂಚಿಕೆ 23%ರಷ್ಟು ಕುಸಿತ ವಾಗಿದೆ ಎಂದು ಪರೋಕ್ಷ ಟೀಕೆ ಮಾಡಿದ್ದಾರೆ.
ಇದ್ರಿಂದಾಗಿ ವಾರ್ಷಿಕವಾಗಿ ಅಂದಾಜು 12 ಸಾವಿರ ಕೋಟಿ ನಷ್ಟ ಅನುಭವಿಸಬೇಕಾಯಿತು. ಇದರ ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ 5300 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ಮಾತಿನಲ್ಲೇ ತಿವಿದಿದ್ದಾರೆ.