ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ (Cm siddaramaiah), ಕೇಂದ್ರದಿಂದ ಬರಬೇಕಾದ ಅನುದಾನದ ಬಗ್ಗೆ ಮಾತನಾಡುತ್ತಾ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad joshi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರು (BJP) ಯಾವತ್ತೂ ಅನುದಾನ ಕೊರತೆ ಬಗ್ಗೆ ಮಾತನಾಡಿಲ್ಲ ಎಂದಿದ್ದಾರೆ.
ಅನುದಾನದ ವಿಚಾರ, ತೆರಿಗೆ ಹಂಚಿಕೆ ವಿಚಾರ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ, ಸಂಸದ ಬೊಮ್ಮಾಯಿ ಮಾತನಾಡಿದ್ದಾರಾ (Basaraj BombayI) ? ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ.ನಾವು ರಾಜ್ಯದಿಂದ ನಾಲ್ಕೂವರೆ ಲಕ್ಷ ಕೋಟಿ ಕೊಟ್ಟು, 60 ಸಾವಿರ ಕೋಟಿ ತೆಗೆದುಕೊಳ್ಳುವುದು ಅನ್ಯಾಯ ಅಲ್ವೇ ಎಂದಿದ್ದಾರೆ.
15ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ 11,495 ಸಾವಿರ ಕೋಟಿ ಅನ್ಯಾಯ ಆಗಿದೆ. 5,495 ಕೋಟಿ ವಿಶೇಷ ಅನುದಾನ ಕೊಡಬೇಕು ಅಂತ ಹೇಳಿದ್ರು, ಪೇರಿಪೆರಿಯಲ್ ರಿಂಗ್ ರೋಡ್, ಕೆರೆ ಅಭಿವೃದ್ಧಿ ಇದನ್ನು ಮಿಸ್ಟರ್ ಜೋಶಿ ಇವರು ಕೇಳಬೇಕೋ, ಬೇಡ್ವಾ?. ಕೇಂದ್ರ ಈ ಅನುದಾನ ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟು ಬಿಡುತ್ತೇನೆ. ಅವರು ರಾಜಕೀಯ ಬಿಡುತ್ತಾರಾ? ಕೇಳಿ ಎಂದು ಸಿಎಂ ಸವಾಲು ಹಾಕಿದ್ದಾರೆ.