ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗುರುವಾರ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರು ಪದಗ್ರಹಣ ಮಾಡಿದರು. ನಿಕಟಪೂರ್ವ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್ ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಸಮಾರಂಭದಲ್ಲಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ , ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಪಕ್ಷದ ಕಾರ್ಯಾಧ್ಯಕ್ಷರುಗಳು, ಮಾಜಿ ಮಹಿಳಾ ಅಧ್ಯಕ್ಷರುಗಳು, ಶಾಸಕ ಹ್ಯಾರಿಸ್ ಸೃರಿ ಮತ್ತಿತರರು ಭಾಗವಹಿಸಿದ್ದರು.