ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಬ್ಬಿನ ದರ ಏರಿಕೆಗೆ ಆಗ್ರಹಿಸಿ ರೈತರ ನಿರಂತರ ಪ್ರತಿಭಟನೆ ಸಂಬಂಧ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದ ಜೊತೆ ಸಭೆ ನಡೆಸಿದ್ದಾರೆ.
ಕಬ್ಬು ಬೆಳೆಗಾರರ ಹೋರಾಟದ ಬಗ್ಗೆ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆದಿದ್ದು, ಅಂತಿಮವಾಗಿ ದರ ನಿಗದಿಯ ಪರಮಾಧಿಕಾರವನ್ನು ಸಚಿವ ಸಂಪುಟ ಮುಖ್ಯಮಂತ್ರಿಗಳಿಗೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ನಡೆಸಲು ನಿರ್ಧರಿಸಿದ್ದು, ಸಭೆ ಬಳಿಕ ರೈತರ ಬೇಡಿಕೆಗಳ ಕುರಿತು ಹಾಗೂ ಕಬ್ಬಿನ ದರ ನಿಗದಿಯ ಬಗ್ಗೆ ಸ್ಪಷ್ಟತೆ ಸಿಗಲಿದೆ.













