ಬೀದರ್: ‘ಬೀದರ್‌ನಲ್ಲಿ ನೂತನ ಜಿಲ್ಲಾ ಆಡಳಿತ (New district administration)ಸಂಕೀರ್ಣ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು (Chief Minister Siddaramaiah)ತಿಂಗಳಲ್ಲಿ ಚಾಲನೆ ನೀಡುವರು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ (Minister Ishwara B.Khandre)ತಿಳಿಸಿದರು.
ಬುಧವಾರ ಇಲ್ಲಿ ನಡೆದ ಜಾನುವಾರು ತಳಿ ಸಂವರ್ಧನಾ ಮತ್ತು ತರಬೇತಿ (Foundation laying of the centre)ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ₹60 ಕೋಟಿ ವೆಚ್ಚದಲ್ಲಿ ಜಿಲ್ಲಾ ಸಂಕೀರ್ಣ ನಿರ್ಮಾಣಕ್ಕೆ ಕಲಬುರಗಿಯಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದರು.
ಅದೇ ರೀತಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಹೊನ್ನಿಕೇರಿ ಹಾಗೂ ದೇವ ದೇವ ವನದಲ್ಲಿ ಎಕೋ ಟೂರಿಸಂ ಪಾರ್ಕ್ ನಿರ್ಮಾಣಕ್ಕೂ ಒಪ್ಪಿಗೆ ಸಿಕ್ಕಿದ್ದು, ಎರಡಕ್ಕೂ ತಲಾ ₹15 ಕೋಟಿ ಮಂಜೂರಾಗಿದೆ ಎಂದು ತಿಳಿಸಿದರು.
ಬೀದರ್ ಜಿಲ್ಲೆಯ ಎಲ್ಲ ಜನವಸತಿ ಪ್ರದೇಶಗಳಲ್ಲಿ ಶಾಶ್ವತ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಾರಾಯಣಪುರದ ಬಸವಸಾಗರ ಜಲಾಶಯದಿಂದ ನೀರು ತರಲು ನಿರ್ಧರಿಸಲಾಗಿದೆ. ₹7 ಸಾವಿರ ಕೋಟಿ ವೆಚ್ಚದಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಕೆಯೂ ಅನುಮೋದನೆ ಸಿಕ್ಕಿದೆ ಎಂದು ಹೇಳಿದರು.