• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ ಸ್ಥಳ ಭೇಟಿ:ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
October 24, 2024
in Top Story, ಇತರೆ / Others, ಕರ್ನಾಟಕ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಗುರುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದರು.ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.

ADVERTISEMENT

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ ನಡೆಸಿದೆ.ಘಟನೆಯಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ.ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ.ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ ಎಂದು ಹೇಳಿದರು.

ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಕಾರ್ಮಿಕ ಇಲಾಖೆ, 3 ಲಕ್ಷ ಬಿಬಿಎಂಪಿಯಿಂದ ಸೇರಿ ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಇದು ಕಂದಾಯ ಬಡಾವಣೆಯಾಗಿದ್ದು, ಈ ಕಟ್ಟಡವನ್ನು ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಿಸಲಾಗಿದೆ. ಅನಧಿಕೃತ ಕಾಮಗಾರಿ ಎಂದು ನೋಟಿಸ್‌ ನೀಡಿದ್ದರೂ, ನಿರ್ಮಾಣ ಮಾಡಿರುವುದರಿಂದ ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ. ಈ ಪ್ರದೇಶದ ವ್ಯಾಪ್ತಿಗೆ ಬರುವ ವಿಭಾಗೀಯ ಅಧಿಕಾರಿ ಹಾಗೂ ಎಕ್ಸಿಕ್ಯೂಟಿವ್ ಎಂಜಿನಿಯರ್ ಅವರಿಗೂ ನೋಟೀಸ್ ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣದಲ್ಲಿ ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚ ಭರಿಸುವ ಜೊತೆಗೆ ಪರಿಹಾರವನ್ನೂ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.

ಅನಧಿಕೃತ ಕಾಮಗಾರಿ ಕೈಗೊಳ್ಳದಂತೆ ಜನರಲ್ಲಿ ಸಿಎಂ ಮನವಿ. ಜನರು ಕಾನೂನಿನ ಪ್ರಕಾರ ಮನೆಗಳನ್ನು ನಿರ್ಮಿಸಬೇಕೇ ಹೊರತು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಬಾರದೆಂದು ಜನರಲ್ಲಿ ಸಿಎಂ ಮನವಿ ಮಾಡಿದರು. ಕಾಮಗಾರಿ ನಿಲ್ಲಿಸುವಂತೆ ನೋಟೀಸು ನೀಡಿದ ನಂತರವೂ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಲ್ಲಿಸದ ಕಾರಣ , ಈ ದುರಾದೃಷ್ಟರ ಘಟನೆ ನಡೆದಿದೆ. ಇಂತಹ ಘಟನೆಗಳು ಮರುಕಳಿಸದಿರಲು , ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು ಮತ್ತು ಎಇಇ ನಿಂದ ಸೂಕ್ತ ಪರಿಶೀಲನೆಯಾಗಬೇಕು. ಇದರ ಜೊತೆಗೆ ಕಳಪೆ ಕಾಮಗಾರಿ ಮಾಡದೇ ಕಟ್ಟಡದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಈ ಕಟ್ಟಡ ಕುಸಿತ ಕಳಪೆ ಕಾಮಗಾರಿಯಿಂದಾಗಿದೆಯೇ ಹೊರತು ಮಳೆಯ ಕಾರಣದಿಂದಲ್ಲ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು.ಇನ್ನುಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ:ಸರ್ಕಾರ ಮಳೆ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ಪ್ರತಿಪಕ್ಷದವರ ಮಾತು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಟೀಕೆಗಳನ್ನು ಮಾಡುವುದು ಸುಲಭ. ಹಿಂದಿನ ಸರ್ಕಾರದ ಅವಧಿಯಲ್ಲೂ ಮಳೆ ಸಂಭವಿಸಿದ್ದು , ಪ್ರತಿಪಕ್ಷದ ನಾಯಕನಾಗಿ ನಾನು ದೋಣಿಯಲ್ಲಿ ಕುಳಿತು ಸ್ಥಳ ವೀಕ್ಷಣೆ ಮಾಡಿದ್ದೆ.ನೂರಾರು ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ.ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕೆ ಇರಬೇಕಾಗುತ್ತದೆ. ಆ ಭಾಗದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.ರಕ್ಷಣಾ ಕಾರ್ಯಗಳನ್ನು ಮಾಡಲಾಗುತ್ತಿದೆ.ಈ ವರ್ಷ ಮಳೆ ಜಾಸ್ತಿ ಆಗಿದ್ದು, ಇನ್ನೂ ಹೆಚ್ಚು ಮೂಲಸೌಕರ್ಯಗಳ ಅಭಿವೃದ್ಧಿ ಆಗಬೇಕಿದೆ. ರಾಜಕಾಲುವೆಗಳಲ್ಲಿ ಒತ್ತುವರಿ ಕ್ಲಿಯರ್ ಮಾಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಿಪತ್ತುನಿರ್ವಹಣೆಗಾಗಿ 3 ಸಾವಿರ ಕೋಟಿರೂ.ಗಳ ಸಾಲವನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತ ಕಟ್ಟಡಗಳ ಸಮೀಕ್ಷೆ ನಡೆಸಲಾಗಿದ್ದರ ವಸ್ತುಸ್ಥಿತಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಸರ್ಕಾರವಿದ್ದರೂ , ಇಂತಹ ವಿಷಯಗಳು ಪ್ರಸ್ತುತವಾಗಿರುತ್ತವೆ. ಕೆಲವರು ಈ ಬಗ್ಗೆ ಕಾನೂನು ಮೊರೆ ಹೋಗಿದ್ದಾರೆ. ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ , ಚನ್ನಪಟ್ಟಣ ಕ್ಷೇತ್ರಕ್ಕೆ ನಾಮಿನೇಷನ್ ಮಾಡಲು ಸಿಪಿ ಯೋಗೇಶ್ವರ್, ಡಿಸಿಎಂನೊಂದಿಗೆ ಚನ್ನಪಟ್ಟಣಕ್ಕೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು ಎಂದರು.

Tags: BBMPbuilding collapseCM Siddaramaiah‌collapse case at BabusapalyaCongress Partystate government has given Rs 5 lakh
Previous Post

ಯೋಗೀಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು:ಸಿ.ಎಂ.ಸಿದ್ದರಾಮಯ್ಯ ಕರೆ

Next Post

ಸಿ.ಟಿ.ರವಿ ಅವರ ಸಹಕಾರ ಯೋಗೇಶ್ವರ್ ಪರವಾಗಿದೆ:ಡಿ. ಕೆ.ಸುರೇಶ್

Related Posts

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
0

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ (Kempegowda International Airport) ಕರ್ನಾಟಕದ...

Read moreDetails

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

July 8, 2025

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

July 8, 2025

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

July 8, 2025
Next Post

ಸಿ.ಟಿ.ರವಿ ಅವರ ಸಹಕಾರ ಯೋಗೇಶ್ವರ್ ಪರವಾಗಿದೆ:ಡಿ. ಕೆ.ಸುರೇಶ್

Recent News

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

by ಪ್ರತಿಧ್ವನಿ
July 8, 2025
Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

by ಪ್ರತಿಧ್ವನಿ
July 8, 2025
Top Story

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

by ಪ್ರತಿಧ್ವನಿ
July 8, 2025
Top Story

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

by ಪ್ರತಿಧ್ವನಿ
July 8, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada