• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ರಾಜ್ಯದ ಜನತೆಗೆ ಹೊಸ ವರ್ಷದ ಶುಭ ಕೋರಿದ ಸಿಎಂ

ರಾಜ್ಯವನ್ನು ಅಭಿವೃದ್ಧಿಯತ್ತ ನಡೆಸಲು ಅಧಿಕಾರಿಗಳ ಸಹಕಾರ ಅಗತ್ಯ. ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಿ-ಅಧಿಕಾರಿಗಳಿಗೆ ಸಿಎಂ ಕರೆ

ಪ್ರತಿಧ್ವನಿ by ಪ್ರತಿಧ್ವನಿ
January 1, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
CM Siddaramaiah: ರಾಜ್ಯದ ಜನತೆಗೆ  ಹೊಸ ವರ್ಷದ ಶುಭ ಕೋರಿದ ಸಿಎಂ
Share on WhatsAppShare on FacebookShare on Telegram

ರಾಜ್ಯದ ಜನತೆಗೆ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸುವ ಜೊತೆಗೆ, ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಶುಭಕೋರಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ADVERTISEMENT

ಹೊಸ ವರ್ಷದ ಮೊದಲ ದಿನವಾದ ಇಂದು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದು ನಮ್ಮ ಪದ್ಧತಿ. ಹಿಂದೂ ಪದ್ಧತಿಯಲ್ಲಿ ಯುಗಾದಿ ಹೊಸ ವರ್ಷವಾಗಿದ್ದರೂ, ಇಂಗ್ಲೀಷ್ ಕ್ಯಾಲೆಂಡರ್ ನಂತೆ ಇಂದು ಪ್ರಾರಂಭವಾಗುವ ಹೊಸ ವರ್ಷವನ್ನು ವಿಶ್ವದಾದ್ಯಂತ ಸಂಭ್ರಮಾಚರಣೆಯಿಂದ ಸ್ವಾಗತಿಸಲಾಗುತ್ತದೆ. 2026 ರ ವರ್ಷ ರಾಜ್ಯಕ್ಕೆ ಸಮೃದ್ಧಿಯನ್ನು ತರಲಿ ಹಾಗೂ ರಾಜ್ಯ ಜನತೆ ಸುಖ ಸಮೃದ್ಧಿ ಶಾಂತಿಯಿರಲಿ, ಬಡವರ ಹಾಗೂ ರೈತರ ಮೊಗದಲ್ಲಿ ಸಂತೋಷ ಕಾಣಲೆಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.

ಬೆಳೆಪರಿಹಾರದಿಂದ ರೈತರು ತುಸು ನೆಮ್ಮದಿ ಕಾಣುವಂತಾಗಿದೆ
ಉತ್ತಮ ಮಳೆಬೆಳೆಯಿಂದ ಹೆಚ್ಚಿನ ಸಮಸ್ಯೆ ಪರಿಹಾರವಾಗುತ್ತದೆ. 2025 ರಲ್ಲಿ ಉತ್ತಮ ಮಳೆಯಾದ ಜೊತೆಗೆ ಬೆಳೆಹಾನಿಯೂ ಸಂಭವಿಸಿತು. 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿ, ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸುವುದು ಸರ್ಕಾರದ ಕರ್ತವ್ಯ. ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ನಿಂದ ಹಾಗೂ ರಾಜ್ಯ ಸರ್ಕಾರ ಎಸ್ ಡಿ ಆರ್ ಎಫ್ ನಿಂದ ಪರಿಹಾರವನ್ನು ನೀಡುತ್ತದೆ. ರೈತರಿಗೆ ಹೆಚ್ಚಿನ ಪರಿಹಾರಗಳನ್ನು ಒದಗಿಸುವ ಮೂಲಕ ಅವರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ರೈತರ ಹಾಗೂ ಜನರ ಸಂಕಷ್ಟಗಳಿಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿರುತ್ತದೆ. 2025 ರಲ್ಲಿ ಖುಷ್ಕಿ, ನೀರಾವರಿ ಸೇರಿದಂತೆ ಬೆಳೆಗೆ ಪ್ರತಿ ಹೆಕ್ಟೇರ ಗೆ 8500 ರೂ ಪರಿಹಾರ ನೀಡಲಾಗಿದ್ದು, ರೈತರಿಗೆ ತುಸು ನೆಮ್ಮದಿ ಕಾಣುವಂತಾಗಿದೆ ಎಂದರು.

ಸಮಸಮಾಜ ನಿರ್ಮಿಸುವುದು ಸರ್ಕಾರ ಗುರಿ
ವಿರೋಧ ಪಕ್ಷಗಳು ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಕಷ್ಟಸುಖಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡಬೇಕಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ರಾಜಕೀಯ ಸ್ವಾತಂತ್ರ್ಯದಿಂದ ಲಾಭವಿಲ್ಲ. ಸಾಮಾಜಿಕ ಆರ್ಥಿಕ ಸ್ವಾತಂತ್ರ್ಯದಿಂದಲೇ ರಾಜಕೀಯ ಪ್ರಭುತ್ವಕ್ಕೆ ನಿಜ ಅರ್ಥ ದೊರೆಯುತ್ತದೆ ಎಂದು ಪ್ರತಿಪಾದಿಸಿದ್ದರು. ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ, ಆಧಿಕಾರ ವಿಕೇಂದ್ರೀಕರಣಗಳನ್ನು ಸಾಧಿಸುವುದು ನಮ್ಮ ಹೊಣೆಗಾರಿಕೆ. ಸಮಸಮಾಜ ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ರಾಜ್ಯದ ಎಲ್ಲ ಜನತೆಗೆ ನ್ಯಾಯ ಒದಗಿಸುವುದು ಅವಶ್ಯ. ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಬೇಕು. ವಿಳಂಬ ನೀತಿ ಅನುಸರಿಸುವುದೂ ಒಂದು ರೀತಿಯ ಅಪರಾಧವೇ ಎಂದರು.

ಅಧಿಕಾರಿಗಳು ಹೊಸ ಉತ್ಸಾಹದಿಂದ ಕಾರ್ಯನಿರ್ವಹಿಸಬೇಕು
ಹೊಸ ವರ್ಷ ಜನರ ಕೆಲಸ ನಿರ್ವಹಿಸಲು ಹೊಸ ಉತ್ಸಾಹದಿಂದ ಶ್ರಮಿಸಬೇಕು. ಅಧಿಕಾರಿಗಳು 30-40 ವರ್ಷಗಳು ಅಧಿಕಾರದಲ್ಲಿದ್ದರೆ, ನಾವು ಅಧಿಕಾರದಲ್ಲಿ ಐದು ವರ್ಷಗಳು ಇರುತ್ತೇವೆ. ರಾಜ್ಯದ ಜನರು ನಿನ್ನೆ ಮತ್ತು ಇಂದು ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ನೂತನ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಅತ್ಯಂತ ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ನಡೆದಿದೆ.ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿರುವ ಇಲಾಖೆಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಸಾಮಾಜದ ವಂಚಿತರಿಗೆ ನ್ಯಾಯ ಒದಗಿಸಿ
ರಾಜ್ಯದ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಾಗ ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದರು. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದರು.

Tags: CM Siddaramaiahcm siddaramaiah and dk shivakumarcm siddaramaiah breakfastcm siddaramaiah breakfast meetcm siddaramaiah in mangalorecm siddaramaiah latest newscm siddaramaiah lunchcm siddaramaiah newscm siddaramaiah speechcm siddaramaiah today newscm siddaramaiah vs dk shivakumarkarnataka cm siddaramaiahkarnataka cm siddaramaiah castsiddaramaiahsiddaramaiah news
Previous Post

BBK12: ʼಉಗುರಲ್ಲೇ ಹೊಡೆದು ಸಾಯಿಸ್ತೀನಿʼ: ಧ್ರುವಂತ್‌ಗೆ ಗಿಲ್ಲಿ ಎಚ್ಚರಿಕೆ

Next Post

DK Shivakumar: ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
0

ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ...

Read moreDetails
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

January 16, 2026
Next Post
DK Shivakumar: ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

DK Shivakumar: ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

Recent News

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ
Top Story

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್
Top Story

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು
Top Story

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

January 16, 2026
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!