• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ರಾಜೀನಾಮೆ ವಿಚಾರ: ಯಡಿಯೂರಪ್ಪನವರ‌ ಹೇಳಿಕೆಯ ಹಿಂದೆ ಬೇರೆಯದೇ ತಂತ್ರವಿದೆ -ಡಿಕೆಶಿ

Any Mind by Any Mind
June 6, 2021
in ಕರ್ನಾಟಕ
0
ಸಿಎಂ ರಾಜೀನಾಮೆ ವಿಚಾರ: ಯಡಿಯೂರಪ್ಪನವರ‌ ಹೇಳಿಕೆಯ ಹಿಂದೆ ಬೇರೆಯದೇ ತಂತ್ರವಿದೆ -ಡಿಕೆಶಿ
Share on WhatsAppShare on FacebookShare on Telegram

ರಾಜಕಾರಣದಲ್ಲಿ ನಾನಾ ತಂತ್ರಗಾರಿಕೆಗಳಿರುತ್ತವೆ. ಹಾಗೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ರಾಜೀನಾಮೆ ಕುರಿತ ಹೇಳಿಕೆ ಹಿಂದೆ ಬೇರೆಯದೇ ತಂತ್ರ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ADVERTISEMENT
ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ನೀಡಲು ಸಿದ್ಧ ಸಿಎಂ ಯಡಿಯೂರಪ್ಪ ಸ್ಫೋಟಕ ಹೇಳಿಕೆ

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದ್ದು, ರಾಜಕಾರಣಿದಲ್ಲಿ ಬಹಳ ತಂತ್ರಗಳಿರುತ್ತವೆ. ಹೇಳುವುದೊಂದು ಇದ್ದರೆ, ಮಾಡುವುದು ಮತ್ತೊಂದು ಇರುತ್ತದೆ. ಯಡಿಯೂರಪ್ಪ ಅವರದ್ದು ಬೇರೆಯದೇ ತಂತ್ರವಿದೆ. ರಾಜ್ಯ ಹಾಗೂ ಬಿಜೆಪಿ ರಾಜಕಾರಣದಲ್ಲಿ ಯಡಿಯೂರಪ್ಪ ಅವರು ಗಟ್ಟಿ ನಾಯಕ. ಅವರ ನಾಯಕತ್ವದಲ್ಲಿ ಚುನಾವಣೆ ನಡೆದಿದೆ. ಅವರ ನಾಯಕತ್ವದಲ್ಲೇ ನಮ್ಮ ಪಕ್ಷದ ಸ್ನೇಹಿತರನ್ನು ಕರೆದುಕೊಂಡು ಹೋಗಿ, ಸರಕಾರ ಮಾಡಿದ್ದಾರೆ. ಈಗ ಅವರನ್ನು ಬದಲಿಸುವ ನಿರ್ಧಾರ ಅವರ ಪಕ್ಷಕ್ಕೆ ಸಂಬಂಧಿಸಿದ್ದು. ನಮಗೂ ಅದಕ್ಕೂ ಸಂಬಂಧ ಇಲ್ಲ. ನನ್ನ ಪ್ರಕಾರ ಯಡಿಯೂರಪ್ಪ ಅವರು ಗಟ್ಟಿ ಮನುಷ್ಯ, ಅಷ್ಟು ಸಲೀಸಾಗಿ ಅವರು ಜಗ್ಗಲ್ಲ. ಏನೇನಾಗುತ್ತೆ ಕಾದು ನೋಡೋಣ ಎಂದು ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಜನ ಒಪ್ಪೋದು ಬಿಡೋದು ಬೇರೆ ವಿಚಾರ. ನಾವು ವಿರೋಧ ಪಕ್ಷವಾಗಿ ಏನು ಬೇಕಾದರೂ ಹೇಳಬಹುದು. ಆಡಳಿತ ವೈಫಲ್ಯ, ಆಂತರಿಕ ಬಿಕ್ಕಟ್ಟು, ಏಳೆಂಟು ನಾಯಕರು ತಾವೇ ಸಿಎಂ ಆಗಬೇಕು ಅಂತಾ ಸಿದ್ಧವಾಗಿದ್ದಾರೆ. ಮುಂದೆ ಯಡಿಯೂರಪ್ಪನವರೇ ಸಿಎಂ ಎನ್ನುವವರು, ಹಿಂದೆ ತಾವೇ ಸೂಟ್ ಹೊಲಿಸಿ, ಮುಹೂರ್ತ ಇಟ್ಟುಕೊಂಡು ರೆಡಿಯಾಗಿದ್ದಾರೆ. ಎಲ್ಲವೂ ನಮಗೆ ಗೊತ್ತಿದೆ ಎಂದಿದ್ದಾರೆ.

ದುರ್ದೈವ ಏನೆಂದರೆ, ಬಿಜೆಪಿಯವರು ಶಿಸ್ತು ಕಳೆದುಕೊಂಡಿದ್ದಾರೆ. ಯಡಿಯೂರಪ್ಪ ಅವರ ಹೇಳಿಕೆಯನ್ನು ಎರಡು ಮೂರು ರೀತಿಯಲ್ಲಿ ಬೇಕಾದರೂ ವಿಶ್ಲೇಷಣೆ ಮಾಡಬಹುದು. ನನ್ನನ್ನು ಮುಟ್ಟಿ ನೋಡಿ ಅಂತಾ ಎಚ್ಚರಿಕೆ ಇರಬಹುದು, ನಾನು ಶಿಸ್ತಿನ ಸಿಪಾಯಿ ಅಂತಾನೂ ಇರಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸರ್ಕಾರಕ್ಕೆ ನಿಯಂತ್ರಣವೇ ಇಲ್ಲ

ಅಧಿಕಾರಿಗಳನ್ನು ವರ್ಗಾವಣೆಯಾದರೂ ಮಾಡಿಕೊಳ್ಳಲಿ, ಬೇರೆ ಏನು ಬೇಕಾದರೂ ಮಾಡಿಕೊಳ್ಳಲಿ. ಅದು ಸರ್ಕಾರ ಹಾಗೂ ಅದರ ಆಡಳಿತಕ್ಕೆ ಬಿಟ್ಟ ವಿಚಾರ. ಆದರೆ ಇವರಿಂದ ಅಧಿಕಾರಿಗಳನ್ನು ನಿಯಂತ್ರಿಸಲು ಆಗುವುದಿಲ್ಲ ಎನ್ನುವುದು ಜನರಿಗೆ ಅರ್ಥವಾಗಿದೆ. ನಿತ್ಯ ಮಾಧ್ಯಮಗಳ ವರದಿ ನೋಡಿದಾಗ, ಇಡೀ ಆಡಳಿತ ವ್ಯವಸ್ಥೆ ಕುಸಿದಿದೆ ಎಂಬುದು ಸ್ಪಷ್ಟವಾಗಿ ಅರ್ಥವಾಗುತ್ತದೆ. ಆಡಳಿತಾತ್ಮಕವಾಗಿ ಯಾವುದೇ ನಿಯಂತ್ರಣ ಇಲ್ಲವಾಗಿದೆ. ಇದೆಲ್ಲದರಿಂದ ತೊಂದರೆ ಅನುಭವಿಸುತ್ತಿರುವವರು ಮಾತ್ರ ಸಾಮಾನ್ಯ ಜನ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

Previous Post

ವರ್ಗಾವಣೆ ತಡೆಗೆ ವಿಫಲ ಯತ್ನ ನಡೆಸಿ ನಿರಾಶರಾದ ರೋಹಿಣಿ ಸಿಂಧೂರಿ

Next Post

ಯುದ್ಧಗಳಾದಾಗ ಮನುಷ್ಯರು ಮಾತ್ರ ತೊಂದರೆಗೆ ಸಿಕ್ಕೋದಾ, ಅಲ್ಲಿನ ಪ್ರಾಣಿ ಪಕ್ಷಿಗಳಿಗೇನೂ ಆಗಲ್ವಾ?

Related Posts

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಯುದ್ಧಗಳಾದಾಗ ಮನುಷ್ಯರು ಮಾತ್ರ ತೊಂದರೆಗೆ ಸಿಕ್ಕೋದಾ, ಅಲ್ಲಿನ ಪ್ರಾಣಿ ಪಕ್ಷಿಗಳಿಗೇನೂ ಆಗಲ್ವಾ?

ಯುದ್ಧಗಳಾದಾಗ ಮನುಷ್ಯರು ಮಾತ್ರ ತೊಂದರೆಗೆ ಸಿಕ್ಕೋದಾ, ಅಲ್ಲಿನ ಪ್ರಾಣಿ ಪಕ್ಷಿಗಳಿಗೇನೂ ಆಗಲ್ವಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada