ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ (Congress) ಪಕ್ಷದೊಳಗೆ ಸೆಪ್ಟೆಂಬರ್ ಕ್ರಾಂತಿಯ ಸಂಚಲನ ಮೂಡಿದ್ದು, ಸಿಎಂ ಸಿದ್ದರಾಮಯ್ಯ (Cm siddaramaiah) ದೆಹಲಿಯಿಂದ ಬರ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಗೊಂದಲ ಇನ್ನಷ್ಟು ಹೆಚ್ಚಾಗಿದೆ.

ಸಿಎಂ ಸಿದ್ದರಾಮಯ್ಯ, KPCC ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಸಚಿವ ಸ್ಥಾನ ಬದಲಾವಣೆ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್‌ನಲ್ಲಿ ಒಬ್ಬೊಬ್ಬ ಸಚಿವರಿಂದ ಒಂದೊಂದು ರೀತಿ ಹೇಳಿಕೆಗಳು ಬರ್ತಿದೆ. ಒಂದೆಡೆ ಸಚಿವ ಕೆ.ಎನ್ ರಾಜಣ್ಣ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗುತ್ತದೆ ಎಂದಿದ್ರು. ಇತ್ತ ಸಚಿವ ಸತೀಶ್ ಜಾರಕಿಹೊಳಿ ಸಹ ಬದಲಾವಣೆ ಆಗುತ್ತೆ ಎಂದಿದ್ರು.

ಈ ಮಧ್ಯೆ ಈಗ ಇನ್ನು 2 ವರ್ಷ 11 ತಿಂಗಳು ಸಿದ್ದರಾಮಯ್ಯನವರೇ ಸಿಎಂ ಎಂದು ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ. ಈ ಮಧ್ಯೆ ಸಚಿವ ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ ಆದಿಯಾಗಿ ರಾಜಣ್ಣ ಹೇಳಿಕೆಗೆ ಪಕ್ಷದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.