ಮುಡಾ ಹಾಗು ಅರ್ಕಾವತಿ ರೀಡು ಪ್ರಕರಣದಿಂದ ಪಾರಾಗಲು ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಕಾನೂನಿನ ಕುಣಿಕೆಯಿಂದ ರಕ್ಷಣೆ ಪಡೆಯಲು ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ಬಳಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸಿಬಿಐ ತನಿಖೆ ಎದುರಾಗಬಹುದು ಎನ್ನುವ ಕಾರಣಕ್ಕೆ ರಕ್ಷಣೆ ಪಡೆಯಲು ಮುಂದಾಗಿದ್ದಾರೆ.
ಈ ಹಿಂದೆ ಸಿಬಿಐ ತನಿಖಾ ದಳದ ತನಿಖೆಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ ಮಾಡಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಮುಕ್ತವಾಗಿ ಸಿಬಿಐ ತನಿಖೆ ನಡೆಸಬಹುದಿತ್ತು. ಈ ಹಿಂದೆ ಮುಕ್ತ ತನಿಖೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದ ಕರ್ನಾಟಕ ಸರ್ಕಾರ. ಇದೀಗ ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ಕ್ಯಾಬಿನೆಟ್ ಮೂಲಕ ನಿರ್ಧಾರ ಮಾಡಿದೆ.
ಕರ್ನಾಟಕ ರಾಜ್ಯದಲ್ಲಿ ಅಪರಾಧ ಪ್ರಕರಣಗಳನ್ನು ತನಿಖೆ ಮಾಡಲು ಮುಕ್ತ ಅವಕಾಶ ಇತ್ತು. Delhi Special Police Establishment Act, 1946 ಅಡಿ ತನಿಖೆಗೆ ಅವಕಾಶ ಇತ್ತು. ಈಗ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ಹಿಂಪಡೆಯಲು ಕ್ಯಾಬಿನೆಟ್ ತೀರ್ಮಾನಿಸಿದೆ.
ಹೈಕೋರ್ಟ್ ಹಾಗು ಆದೇಶ ಹಿಡಿದು ನೇರವಾಗಿ ಸಿಬಿಐಗೆ ದೂರು ನೀಡುವ ಅವಕಾಶ ದೂರುದಾರರಿಗೆ ಇರುವ ಕಾರಣಕ್ಕೆ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಅವಕಾಶವನ್ನು ಮೊಟಕುಗೊಳಿಸುವ ನಿರ್ಧಾರ ಮಾಡಿದೆ. ಒಂದು ವೇಳೆ ಯಾರಾದರೂ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐಗೆ ದೂರು ನೀಡಿದರೂ ಈಗ ನೇರವಾಗಿ ತನಿಖೆ ನಡೆಸಲು ಅವಕಾಶ ಇರುವುದಿಲ್ಲ.