ಮಂಡ್ಯ (Mandya): ಲೋಕಸಭಾ ಚುನಾವಣೆಗೂ (Loksabha Election) ಮುನ್ನವೇ ಸರ್ಕಾರ ಗ್ಯಾರಂಟಿ (guarantee) ಯೋಜನೆಗಳ ಬಗ್ಗೆ ರಾಜ್ಯದ ಜನರ ಗಮನ ಸೆಳೆಯಲು ಗ್ಯಾರಂಟಿ ಯೋಜನೆಗಳ ಸಮಾವೇಶ ಮಾಡಲಾಗ್ತಿದೆ.
ಇಂದು ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ನೀಡಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಂಡ್ಯ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಳಿಗ್ಗೆ 11.35ಕ್ಕೆ ಸಿದ್ದರಾಮಯ್ಯ ಆಗಮಿಸಲಿದ್ದಾರೆ.

ಹೆಲಿಕಾಪ್ಟರ್ ಮೂಲಕ ಮಂಡ್ಯ ಪಿಇಎಸ್ ಕಾಲೇಜು ಮೈದಾನಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ, ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಸಮಾವೇಶಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಸುಮಾರು 10 ಸಾವಿರ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಪ್ರತಿಭಟನೆ ಕಾವು ತಟ್ಟುವ ಸಾಧ್ಯತೆಯಿದೆ. ತಮಿಳುನಾಡಿಗೆ (Tamilnadu) ಕಾವೇರಿ ನೀರು (kaveri water) ಹರಿಬಿಡುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕನ್ನಡಪರ ಸಂಘಟನೆ ಹಾಗೂ ರೈತರು ಪ್ರತಿಭಟನೆ ಮಾಡಲಿದ್ದಾರೆ ಎನ್ನಲಾಗಿದೆ.

ಮತ್ತೊಂದು ಕಡೆ ಹಕ್ಕು ಪತ್ರಕ್ಕಾಗಿ ಆಗ್ರಹಿಸಿ ಮದ್ದೂರು ತಮಿಳು ಕಾಲೋನಿ ನಿವಾಸಿಗಳು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಸಿದ್ಧತೆ ನಡೆದಿದೆ.
#karnataka #mandya #siddaramaiah #mandyavisit #ConventiononGuaranteeSchemes #protest