
ಅಪರೇಷನ್ ಕಮಲ ಮಾಡಿ ಸರ್ಕಾರ ಬೀಳಿಸುವುದೇ ಬಿಜೆಪಿಯ ಕೆಲಸವಾಗಿಬಿಟ್ಟಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಯವರಿಗೆ ಸ್ಥಿರ ಸರ್ಕಾರ ಸಹಿಸಿಕೊಳ್ಳಲು ಆಗುತ್ತಿಲ್ಲ.

ಸರ್ಕಾರ ಬೀಳಿಸುವುದು ಅಪರೇಷನ್ ಕಮಲ ಮಾಡುವುದು ಕೆಲಸವಾಗಿದೆ. ಕೇಂದ್ರ ಸರ್ಕಾರದವರಿಗೆ ಇದೇ ಕೆಲಸ ಆಗಿದೆ ಕರ್ನಾಟಕ ಅಭಿವೃದ‍್ಧಿ ಕೆಲಸವನ್ನ ಬಿಜೆಪಿ ಮುಖಂಡರು ಮಾಡುತ್ತಿಲ್ಲ ಬಿಜೆಪಿಗರಿಗೆ ಸರ್ಕಾರ ಬೀಳಿಸುವುದು ಒಂದು ಕಾರ್ಯಕ್ರಮ ಎಂದು ಟೀಕಿಸಿದರು.ಮುಡಾ ಹಗರಣ ಸಂಬಂಧ ಕೋರ್ಟ್ ಯಾವುದೇ ವ್ಯತಿರಿಕ್ತ ತೀರ್ಮಾನ ನೀಡಿಲ್ಲ. ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಸಿದ್ಧರಾಮಯ್ಯ ಯಾವುದೇ ಅಧಿಕಾರ ದುರುಪಯೋಗ ಮಾಡಿಲ್ಲ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ವಿರುದ್ದ ಪ್ರಕರಣ ಹಾಗೇ ಇದೆ . ರಾಜ್ಯಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ ಸಿಎಂ ವಿರುದ್ದ ಖಾಸಗಿ ದೂರು ಬಂದ ತಕ್ಷಣ ನೋಟಿಸ್ ನೀಡಿದರು. ಇದರಲ್ಲಿ ರಾಜ್ಯಪಾಲರ ಮನಸ್ಥಿತಿ ಗೊತ್ತಾಗುತ್ತದೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.












