
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದ ಭೇಟಿಯನ್ನ ನಾಳೆಗೆ ಮುಂದೂಡಿಕೆ ಮಾಡಿದ್ದಾರೆ

ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಹೈಕೋರ್ಟ್ ನಲ್ಲಿ ವಿಚಾರಣೆ ಇರುವ ನಿನ್ನೆಲೆ ಚಾಮುಂಡಿ ಬೆಟ್ಟದ ಭೇಟಿಯನ್ನ ನಾಳೆ ಬೆಳಿಗ್ಗೆಗೆ ಮುಂದೂಡಿಕೆ ಮಾಡಿದ್ದಾರೆ.ಇಂದು ಹೈಕೋರ್ಟ್ ನಲ್ಲಿನ ಬೆಳವಣಿಗೆಗಳ ಮೇಲೆ ಸಿಎಂ ಸಿದ್ದರಾಮಯ್ಯ ನಿಗಾ ಇಡಲಿದ್ದು, ಮನೆಯಲ್ಲೇ ಕುಳತು ವಾದ ಪ್ರತಿವಾದ ವೀಕ್ಷಿಸಲಿದ್ದಾರೆ. ಹೈಕೋರ್ಟ್ ಆಗಸ್ಟ್ 19 ಮತ್ತು 31 ರಂದು ಸುದೀರ್ಘ ವಿಚಾರಣೆ ನಡೆಸಿ ವಿಚಾರಣೆಯನ್ನ ಇಂದು ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿತ್ತು.