ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಸೋಮವಾರ ಬೆಳಗ್ಗೆ ಹಾಗೂ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯದಲ್ಲಿ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.ರಾಜ್ಯ ಉತ್ತಮ ಮಳೆಯಿಂದ ಕೃಷ್ಣರಾಜಸಾಗರ ಹಾಗೂ ಕಬಿನಿ ಜಲಾಶಯ ಭರ್ತಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎರಡೂ ಜಲಾಶಯಗಳಿಗೆ ಜುಲೈ 29ರಂದು ಸಿಎಂ ಸಿದ್ದರಾಮಯ್ಯ ಅವರು ತೆರಳಿ ಬಾಗಿನ ಅರ್ಪಿಸಲಿದ್ದಾರೆ.
ಸೋಮವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಮಂತ್ರಿಮಂಡಲದ ಅನೇಕರು ಭಾಗಿಯಾಗಲಿದ್ದಾರೆ.
ಮೈಸೂರಿನಿಂದ ಕೆಆರ್‌ಎಸ್‌ಗೆ ಸಿಎಂ ತೆರಳಲಿದ್ದು, ಪೂಜೆ ಮುಗಿಸಿ ಮಧ್ಯಾಹ್ನ 1.30ಕ್ಕೆ ನಿರ್ಗಮಿಸಲಿದ್ದಾರೆ. ಕೆಆರ್‌ಎಸ್ ಬಾಗಿನ ಕಾರ್ಯಕ್ರಮ ಮುಗಿದ ನಂತರ ಕಬಿನಿ ಡ್ಯಾಂ ತೆರಳಿ ಬಾಗಿನ ಅರ್ಪಿಸಲಿದ್ದಾರೆ. ಈ ಹಿಂದೆ 2013, 2014ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ್ದರು.
ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಜುಲೈ 29ರಂದು ಮಧ್ಯಾಹ್ನ ಬಾಗಿನ ಅರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್, ಸಣ್ಣ ನೀರಾವರಿ ಸಚಿವ ಬೋಸರಾಜು, ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್, ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸೇರಿ ಹಲವು ಪ್ರಮುಖರು ಭಾಗಿಯಾಗಲಿದ್ದಾರೆ.