MUDA ಬಹುಕೋಟಿ ಹಗರಣದಲ್ಲಿ ಸಿಲುಕಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪೊಲೀಸರು ತಯಾರಾಗ್ತಿದ್ದಾರೆ. ಈಗಾಗ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ವಿರುದ್ಧ ಎಫ್ಐಆರ್ ದಾಖಲಿಸಿರುವ ಮೈಸೂರು ಲೋಕಾಯುಕ್ತ ಪೊಲೀಸರು ಈ ಸಂಬಂಧ ತನಿಖೆಗಾಗಿ 4 ತಂಡ ರಚನೆ ಮಾಡಿದ್ದಾರೆ.ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್, ಡಿವೈಎಸ್‌ಪಿ ಎಸ್. ಮಾಲತೇಶ್ ಅವರನ್ನು ಒಳಗೊಂಡ ತನಿಖಾ ತಂಡ ರಚಿಸಲಾಗಿದೆ ಎಂದು ಮೂಲ ಗಳು ತಿಳಿಸಿವೆ. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಜತೆಗೆ ಶನಿವಾರ ತುರ್ತು ಸಭೆ ನಡೆಸಿದ ಎಸ್‌ಪಿ ಉದೇಶ್, ಪ್ರಕರಣ ಸಂಬಂಧ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಕೋರ್ಟ್‌ನಿಂದ ನೀಡಿರುವ ದಾಖಲೆಗಳು ಹಾಗೂ ದೂರಿನಲ್ಲಿ ಅಡಕವಾಗಿರುವ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ ಮುಂದಿನ ಒಂದೆರಡು ದಿನಗಳ ಕಾಲ ದಾಖಲೆಗಳ ಸಂಪೂರ್ಣ ಪರಿಶೀಲನೆ ನಡೆಸಲಿದೆ ಎಂದು ಹೇಳಲಾಗಿದೆ.2021ರಲ್ಲಿ ಪಾರ್ವತಿ ಅವರಿಗೆ ಬದಲಿ 14 ನಿವೇಶನ ಹಂಚಿಕೆ ಮಾಡಿ ಹಕ್ಕು ಪತ್ರ ನೀಡಿ ರುವ ಬಗ್ಗೆ ತನಿಖೆಯಾಗಲಿದೆ. ಹಾಗೆಯೇ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಸಿದ್ದರಾಮಯ್ಯ ಅವರ ಪಾತ್ರ ಹಾಗೂ ಅವರ ಕುಟುಂಬದ ಪಾತ್ರದ ಬಗ್ಗೆಯೂ ತನಿಖೆ ನಡೆಯಲಿದೆ.
ಕೇಂದ್ರ ಹಣಕಾಸು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ? ಸಿಎಂ ಪ್ರಶ್ನೆ
ರಾಜ್ಯಕ್ಕೆ ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ: ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ, ನವೆಂಬರ್ 21: ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ...
Read moreDetails