
MUDA ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿಲವಿಲ ಅಂತ ಒದ್ದಾಡ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ FIR ದಾಖಲಿಸುವಂತೆ ಲೋಕಾಯುಕ್ತಕ್ಕೆ ಆದೇಶ ನೀಡಿರುವ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಅವ್ರು, ಕಾನೂನು ತಂಡದ ಜತೆ ಚರ್ಚೆಸುತ್ತೇವೆ.

ಮುಂದೆ ನಿಶ್ಚಿತವಾಗಿ ಕಾನೂನು ಹೋರಾಟ ಮಾಡುತ್ತೇವೆ. ವಿಭಾಗೀಯ ಪೀಠ ಅಥವಾ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಕಾನೂನು ತಂಡದ ಜತೆ ಸಮಾಲೋಚನೆ ನಡೆಸುತ್ತೇವೆ ಎಂದು ಹೇಳಿದ್ರು. ಬಿಜೆಪಿ ಪ್ರತಿಭಟನೆ ಗಿಂತಲೂ ಕಾನೂನಿಗೆ ಈ ದೇಶದಲ್ಲಿ ಹೆಚ್ಚು ಮಹತ್ವ ಇದೆ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ವಿಪಕ್ಷವಾಗಿ ಅವರು ಪ್ರತಿಭಟನೆ ಮಾಡ್ತಿದ್ದಾರೆ . ಇದ್ಯಾವುದಕ್ಕೂ ಹೆಚ್ಚಿನ ಮಹತ್ವ ಕೊಡುವುದಿಲ್ಲ ಎಂದು ಹೇಳಿದ್ರು.