
ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ಕರೆ ನೀಡಲಾಗಿದ್ದ ಮೈಸೂರಿನ ತಿ.ನರಸೀಪುರ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.ತಾಲೂಕಿನ ಕಾಂಗ್ರೆಸ್ ಸಮಿತಿ ವತಿಯಿಂದ ಬಂದ್ ಗೆ ಕರೆ ನೀಡಲಾಗಿತ್ತು. ಇಡೀ ತಿ.ನರಸೀಪುರ ಪಟ್ಟಣ ಕಂಪ್ಲೀಟ್ ಬಂದ್ ಆಗಿತ್ತು. ಅಂಗಡಿ-ಮುಂಗಟ್ಟು ಕ್ಲೋಸ್ ಆಗಿದ್ದವು.

ಸಾರ್ವಜನಿಕರ ಸಂಚಾರ ವಿರಳವಾಗಿತ್ತು.ಮೆಡಿಕಲ್ಸ್, ಆಸ್ಪತ್ರೆ, ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಂದ್ ಆಗಿತ್ತು.ಪ್ರಮುಖ ರಸ್ತೆಗಳಲ್ಲಿ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.ಅಹಿತಕರ ಘಟನೆ ಜರುಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತ ಕ್ರಮ ವಹಿಸಿತ್ತು.