ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರನ್ನಾಗಿ ಡಾ.ಸಿ.ಎನ್. ಮಂಜುನಾಥ್ ಅವರನ್ನು ಮುಂದುವರೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಆಡಳಿತ ಮಂಡಳಿ ಸಭೆ ನಡೆಯಿತು. ಮಂಜುನಾಥ್ ಅವರ ಸೇವಾವಧಿ ಜುಲೈ 19ರಂದು ಕೊನೆಗೊಳ್ಳಲಿದೆ. ಮುಂದಿನ ಆರು ತಿಂಗಳವರೆಗೆ ಅವರ ಸೇವಾವಧಿ ವಿಸ್ತರಣೆಯ ಪ್ರಸ್ತಾವಕ್ಕೆ ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ
2007 ರಿಂದ ಸತತ 16 ವರ್ಷಗಳ ಕಾಲ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಡಾ.ಸಿ.ಎನ್. ಮಂಜುನಾಥ್ ಕಾರ್ಯನಿರ್ವಹಿಸುತ್ತಿದ್ದು, ಅವರ ಸೇವಾ ಅವಧಿಯಲ್ಲಿ ಆಸ್ಪತ್ರೆ ನೀಡುವ ಸೇವೆ ಮತ್ತು ಸೌಲಭ್ಯದಲ್ಲಿ ವಿಶ್ವ ಮಾನ್ಯತೆ ಪಡೆದುಕೊಂಡಿದೆ. ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ಜಯದೇವ ಆಸ್ಪತ್ರೆಯ ಶಾಖೆಗಳನ್ನು ತೆರೆಯಲಾಗಿದೆ.

ಜಯದೇವ ಹೃದ್ರೋಗ ಸಂಸ್ಥೆಯ ಮುಖ್ಯ ಕೇಂದ್ರ ಹಾಗೂ ಪ್ರಾದೇಶಿಕ ಕೇಂದ್ರಗಳಿಗೆ ಸಂಬಂಧಿಸಿದ ಹಲವು ಆಡಳಿತಾತ್ಮಕ ವಿಷಯಗಳು ಸಭೆಯ ಕಾರ್ಯಸೂಚಿಯಲ್ಲಿದ್ದವು. ಬಹುತೇಕ ಪ್ರಸ್ತಾವಗಳಿಗೆ ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಎಂದು ಮೂಲಗಳು ಹೇಳಿವೆ. ಎಂದು ತಿಳಿದು ಬಂದಿದೆ





