ಜಮೀರ್ ವಜಾಕ್ಕೆ ಆಗ್ರಹ; ಭೂತ ದಹನ ಮಾಡಿ ಆಕ್ರೋಶ, ಮಾಜಿ ಶಾಸಕ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಮೈಬಣ್ಣವನ್ನು ನಿಂದಿಸಿ ಕೀಳಾಗಿ ವರ್ತಿಸಿದ್ದ ಸಚಿವ ಸಚಿವ ಜಮೀರ್ ಅಹಮದ್ ವಿರುದ್ಧ ಜೆಡಿಎಸ್ ಉಗ್ರ ಪತಿಭಟನೆ ನಡೆಸಿತು.
ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಜಮೀರ್ ಭೂತ ದಹನ ಮಾಡಿದರಲ್ಲದೆ, ಕೂಡಲೇ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯ ಮಾಡಿದರು.
ಜೆಡಿಎಸ್ ಪಕ್ಷದ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ ನಡೆಸಿ ಜಮೀರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು, ಅಲ್ಲದೇ ಘೋಷಣೆಗಳ ಫಲಕಗಳನ್ನು ಪ್ರದರ್ಶಿಸಿ ಉಗ್ರ ಪ್ರತಿಭಟನೆ ನಡೆಸಿದರು. (Karnataka Congress minister B Z Zameer Ahmed Khan made the ‘disgraceful and racially charged’ remarks about Union minister H D Kumaraswamy at an election rally ahead of Wednesday’s Channapatna bypoll.)

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡರು; ನಮ್ಮ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಮಟ್ಟದ ಭಾಷೆ ಬಳಿಸಿರುವುದು ಅಕ್ಷಮ್ಯ. ಅವರ ಮಾತುಗಳು ಅವರ ಕೊಳಕು ಮನಸ್ಥಿತಿಯನ್ನು ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು.
ಸರ್ಕಾರಕ್ಕೆ ನೈತಿಕತೆ ಇದ್ದರೆ ಕ್ರಮ ಕೈಗೊಳ್ಳಿ:
ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿರುವ ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ನೈತಿಕತೆ ಇದ್ದರೆ ಈ ಕ್ರಮ ಕೈಗೊಳ್ಳಬೇಕು ಎಂದರು ಅವರು.
ಕ್ರಮ ಜರುಗಿಸದಿದ್ದರೆ ರಾಜ್ಯಪಾಲರಿಗೆ ದೂರು:

ಜಮೀರ್ ವರ್ಣಬೇಧ ನೀತಿ ಮೂಲಕ ಜನಾಂಗೀಯ ನಿಂದನೆ ಮಾಡಿದ್ದಾರೆ. ಒಕ್ಕಲಿಗ ಸಮುದಾಯವನ್ನು ಅಪಮಾನಿಸಿದ್ದಾರೆ. ಇನ್ನು ಮುಂದೆ ಇದೇ ರೀತಿ ನಾಲಿಗೆ ಹರಿಯಬಿಟ್ಟರೆ, ನಾಡಿನ ಜನರು ತಕ್ಕ ಶಾಸ್ತಿ ಮಾಡುತ್ತಾರೆ. ಒಂದು ವೇಳೆ ಸಂಪುಟದಿಂದ ವಜಾ ಮಾಡದಿದ್ದರೆ, ಜಮೀರ್ ಹೇಳಿಕೆ ವಿರೋಧಿಸಿ ಕಪ್ಪುಬಾವುಟ ಪ್ರದರ್ಶಿಸುತ್ತೇವೆ. ರಾಜ್ಯಪಾಲರು, ಜಿಲ್ಲಾಧಿಕಾರಿಗಳು ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡುತ್ತೇವೆ ಎಂದು ಅವರು ಹೇಳಿದರು.
ಪ್ರತಿಭಟನಾಕಾರರನ್ನು ವಶಕ್ಕೆ ಪಡೆಸ ಪೊಲೀಸರು:
ಬಳಿಕ ಜಮೀರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿ ರಸ್ತೆಗೆ ಇಳಿದಾಗ ಮುಂಜಾಗ್ರತಾ ಕ್ರಮವಾಗಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಜಮೀರ್ ಅಹ್ಮದ್ ಹೇಳಿಕೆ ಅವರು ಶೋಭೆ ತರುವುದಿಲ್ಲ. ಅವರು ಇಂಥ ಕೆಟ್ಟ ಈ ರೀತಿ ಹೇಳಿಕೆ ನೀಡಿದ್ದು ಇದೇ ಮೊದಲಲ್ಲ, ಎಲ್ಲದಕ್ಕೂ ಒಂದು ತಾಳ್ಮೆ ಇರುತ್ತದೆ. ಕುಮಾರಣ್ಣ, ದೇವೇಗೌಡರ ಕುಟುಂಬದ ಖರೀದಿ ಮಾಡಲು ಜಮೀರ್ ಇನ್ನೊಂದು ಜನ್ಮ ಎತ್ತಿ ಬರಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಪಕ್ಷದ ಪರಮೋಚ್ಚ ನಾಯಕ ದೇವೇಗೌಡರು ಒಂದು ಸಮುದಾಯದ ನಾಯಕರಲ್ಲ. ರಾಜ್ಯದ ಏಳೂವರೆ ಕೋಟಿ ಜನರ ನಾಯಕ ದೇವೇಗೌಡರು. ಜಮೀರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ರಾಜ್ಯ ಸರ್ಕಾರ ಕೂಡಲೇ ಜಮೀರ್ ಅವರನ್ನ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಶೈಲಜಾ ರಾವ್, ನಾರಾಯಣ ಸ್ವಾಮಿ, ರಮೇಶ್ ರಾವ್, ಮಂಗಳಮ್ಮ, ಹರಿಬಾಬು, ಮುನಿಸ್ವಾಮಿ, ಸಯ್ಯದ್ ಸೇರಿದಂತೆ ಪಕ್ಷದ ಬೆಂಗಳೂರಿನ ಅನೇಕ ಮುಖಂಡರು ಭಾಗಿಯಾಗಿದ್ದರು.