ನವದೆಹಲಿ (Newdelhi): ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 25 ರೂ. ಹೆಚ್ಚಳವಾಗಿದೆ.
ಇಂದಿನಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (OMC) 19 ಕೆಜಿ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಹೆಚ್ಚಿಸಿವೆ.
ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ನ ಬೆಲೆ 1,795 ರೂಪಾಯಿ ಆಗಿದೆ. ಮುಂಬೈನಲ್ಲಿ 1,749 ರೂ., ಚೆನ್ನೈನಲ್ಲಿ 1,960 ರೂ. ಮತ್ತು ಕೋಲ್ಕತ್ತಾದಲ್ಲಿ 1,911 ರೂ. ನಷ್ಟಿದೆ.
ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಸತತ ಎರಡನೇ ಬಾರಿಗೆ ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಿವೆ. ಫೆಬ್ರವರಿ 1 ರಂದು, 19 ಕೆಜಿ ಗ್ಯಾಸ್ ಸಿಲಿಂಡರ್ ದರವು 14 ರಷ್ಟು ಹೆಚ್ಚಾಗಿತ್ತು.
ತೈಲ ಕಂಪನಿಗಳು ವಾಣಿಜ್ಯ ಬಳಕೆ ಸಿಲಿಂಡರ್ ದರಗಳನ್ನು 1 ಡಿಸೆಂಬರ್ 2023 ರಂದು ದೇಶದ ವಿವಿಧ ಸ್ಥಳಗಳಲ್ಲಿ 21 ರೂಪಾಯಿಗಳಷ್ಟು ಹೆಚ್ಚಿಸಿದ್ದವು. 2024 ರ ಹೊಸ ವರ್ಷದ ಮುನ್ನಾದಿನದಂದು, 19 ಕೆಜಿ ವಾಣಿಜ್ಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 39.50 ರಷ್ಟು ಕಡಿತಗೊಳಿಸಲಾಯಿತು.
ಅಂತಾರಾಷ್ಟ್ರೀಯ ಮಾರುಕಟ್ಟೆಯ ದರ ಏರಿಕೆಗೆ ಅನುಗುಣವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪನಿಗಳು ತಿಳಿಸಿವೆ. 14.2 ಕೆಜಿಯ ಗೃಹ ಬಳಕೆ ಸಿಲಿಂಡರ್ ದರ ಯಥಾಸ್ಥಿತಿಯಲ್ಲಿದೆ.
#delhi #LPG #LPGGas #LPGPricehike