ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ಬೆಲೆ 102.50 ರೂ. ಹೆಚ್ಚಿಸಲಾಗಿದೆ.
ಗ್ಯಾಸ್ ಕಂಪನಿಗಳು ಏಪ್ರಿಲ್ 1ರಿಂದ ಅಂದರೆ ಇಂದಿನಿಂದಲೇ ಜಾರಿಗೆ ಬರುವಂತೆ ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಿದೆ. ಇದರಿಂದ 19 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ದರ 2253ರೂ.ನಿಂದ 2335.50 ರೂ,ಗೆ ಜಿಗಿತ ಕಂಡಿದೆ.
5 ಕೆಜಿ ತೂಕದ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ದರ 655 ರೂ.ಗೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಈಗ 2,355.50 ರೂ. ಏರಿಕೆಯಾಗಿದೆ. ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ದರವನ್ನು ಪ್ರತಿ ಸಿಲಿಂಡರ್‌ಗೆ ₹2205 ರಿಂದ ₹2,307ಕ್ಕೆ ಹೆಚ್ಚಿಸಲಾಗಿದೆ.
ಈಗಾಗಲೇ ಬೆಲೆ ಏರಿಕೆ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಮತ್ತೆ ಬಿಸಿ ತಟ್ಟಿದ್ದು, ಮೇ ತಿಂಗಳ ಮೊದಲ ದಿನವಾದ ಭಾನುವಾರ ವಾಣಿಜ್ಯ ಬಳಕೆ ಸಿಲಿಂಡರ್ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ.
ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದೆ.