• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

ಪ್ರತಿಧ್ವನಿ by ಪ್ರತಿಧ್ವನಿ
July 8, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘ ಉದ್ಘಾಟಿಸಿದ ಸಚಿವರು

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ ‌20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.

ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ / ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ ಇಲಾಖೆಗೆ ಅಗತ್ಯವಾದ ಕೌಶಲಗಳನ್ನು ಇಲ್ಲಿ ಕಲಿಸಲಾಗುತ್ತದೆ. ಇಲ್ಲಿ ಪದವಿ ಪಡೆದವರು ನಮ್ಮ ಇಲಾಖೆಗೆ ಹೆಚ್ಚು ಸೂಕ್ತವಾಗುತ್ತಾರೆ‌. ಈಗಾಗಲೇ ಸಾಕಷ್ಟು ಜನ ಕೆಲಸ ಮಾಡುತ್ತಿದ್ದಾರೆ. ಮುಂದಿನ ನೇಮಕಾತಿ ಸಂದರ್ಭದಲ್ಲಿ ಹೆಚ್ಚು ಆದ್ಯತೆ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವೆ, ಜೊತೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಕೌಶಾಲ್ಯಭಿವೃದ್ದಿ ಸಚಿವರ ಜೊತೆಗೂ ಚರ್ಚೆ ನಡೆಸಿ ಕೂಸಿನ ಮನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಹೆಚ್ಚು ಅವಕಾಶ ಸಿಗುವಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದರು.

ಈ ಹಿಂದೆ ಮಹಿಳೆಯರು ಅಡುಗೆ ಮನೆಗೆ ಸೀಮಿತರಾಗಿದ್ದರು. ಅಂತಹ ಸಂದರ್ಭದಲ್ಲಿ ಈ ಕಾಲೇಜು ಆರಂಭವಾಗಿದೆ. ಆ ಸಂದರ್ಭದಲ್ಲೂ ಸಾಕಷ್ಟು ಮಹಿಳೆಯರು ಈ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಕಲಿಯುವ ಉತ್ಸಾಹ ಇದ್ದರೆ, ಎಲ್ಲವೂ ಸಾಧ್ಯ ಎನ್ನುವುದನ್ನು ತೋರಿಸಿದ್ದಾರೆ. ಕೆಲವರಿಗೆ ಅವಕಾಶ ಕಡಿಮೆ ಸಿಗಬಹುದು, ಕೆಲವರಿಗೆ ಜಾಸ್ತಿ ಸಿಗಬಹುದು. ಆದರೆ ಅದನ್ನು ಸದುಪಯೋಗ ಪಡಿಸಿಕೊಳ್ಳುವ ಮನೋಭಾವ ಬೇಕು ಎಂದು ಸಚಿವರು ಹೇಳಿದರು.

ಈಗ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಮಾಜ ತುಂಬಾ ಬದಲಾಗಿದೆ. ಗಂಡಸರ ಯೋಚನಾ ರೀತಿ ಸಹ ಬದಲಾಗಿದೆ. ಗಂಡು ಹೆಣ್ಣು ಎಂಬ ಬೇಧ ಭಾವ ಉಳಿದಿಲ್ಲ. ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಲಾಗುತ್ತಿದೆ. ನಮ್ಮ ದೇಶದ ಸಕಾರಾತ್ಮಕ ಬೆಳವಣಿಗೆಗೆ ಇದು ಕೂಡ ಕಾರಣವಾಗಿದೆ ಎಂದು ಹೇಳಿದರು.

ಧಾರವಾಡವನ್ನು ವಿದ್ಯಾಕಾಶಿ ಎಂದು ಕರೆಯುತ್ತೇವೆ. ಇಲ್ಲಿಯ ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಶ್ವವಿದ್ಯಾಲಯಗಳು ನಮ್ಮ ಹೆಮ್ಮೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು.

ಈ ವೇಳೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ(Dr. P L Patil), ವಿದ್ಯಾಧಿಕಾರಿ ಡಾ.ಲತಾ ಪೂಜಾರ್(Dr. Latha Poojar), ನಿವೃತ್ತ ಡೀನ್ ಪುಷ್ಪ ಖಾದಿ(Deen Pushpa Khadi), ಪದವೀಧರರ ಸಂಘದ ಅಧ್ಯಕ್ಷರಾದ ಡಾ.ಸರೋಜಿನಿ ಕರಕಣ್ಣವರ್(Dr. Sarojinin Karakannavar), ಕಾರ್ಯದರ್ಶಿ ಡಾ. ವೀಣಾ ಜಾಧವ(Dr. Veena Jadhav), ಜಂಟಿ ಕಾರ್ಯದರ್ಶಿ ಡಾ.ಸಾಧನಾ ಕುಳ್ಳೊಳ್ಳಿ(Dr. Sadana Kullolli) ,ಖಜಾಂಚಿ ಡಾ.ಮಂಜುಳಾ ಪಾಟೀಲ(Dr. Manjula Patil), ಸಹ ಖಜಾಂಚಿ ಡಾ. ಉಮಾ ಕುಲಕರ್ಣಿ(Uma Kulakarni), ಸದಸ್ಯರಾದ ಡಾ.ಹೇಮಲತಾ(Dr. Hemalatha), ಡಾ.ರೇಣುಕಾ ಸಾಳುಂಕೆ(Dr. Renuka Salunke), ಡಾ.ಗೀತಾ ಚಿಟಗುಬ್ಬಿ(Dr. Geetha Chitagubbi), ಡಾ.ಪ್ರೇಮಾ ಪಾಟೀಲ(Dr. Prema Patil), ಡಾ.ರಾಜೇಶ್ವರಿ(Dr. rajeshwari),ಮಾಳವಿಕಾ ಮೊಕಾಶಿ(Malavika Mokashi) ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: lakshmi hebbalkar​​Lakshmi hebbalkarlakshmi hebbalkar belgaumlakshmi hebbalkar brotherlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar healthlakshmi hebbalkar husbandlakshmi hebbalkar livelakshmi hebbalkar mlalakshmi hebbalkar newslakshmi hebbalkar rcblakshmi hebbalkar reactionlakshmi hebbalkar speachlakshmi hebbalkar speechlakshmi hebbalkar today newslakshmi hebbalkar videoMinister Lakshmi Hebbalkar
Previous Post

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

Next Post

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
Next Post

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada