ಹುಬ್ಬಳ್ಳಿ : ಮುಸಲ್ಮಾನರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್ ಕೆಲಸವೆಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಬಜರಂಗದಳ ನಿಷೇಧ ಮಾಡುವ ವಿಚಾರದಲ್ಲಿ ಅವರಲ್ಲೇ ಗೊಂದಲಬವಿದೆ. ಆದರೆ ಭಾರತೀಯ ಸಂಸ್ಕೃತಿಯನ್ನು ರಕ್ಷಿಸುತ್ತಿರುವ ಬಜರಂಗದಳವನ್ನು ಪಿಎಫ್ಐಗೆ ಹೋಲಿಕೆ ಮಾಡಿದ್ದು ದೊಡ್ಡ ದುರಂತ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಹಿಂದೂಗಳನ್ನು ಪಕ್ಕಕ್ಕೆ ಸರಿಸುವ ಕೆಲಸ ಮಾಡ್ತಿದೆ. ಎಐಸಿಸಿ ಅಧ್ಯಕ್ಷರು ಪ್ರಧಾನಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಮೋದಿಯವರನ್ನು ವಿಷಸರ್ಪಕ್ಕೆ ಹೋಲಿಸಿದಾಗ ಖರ್ಗೆ ಜೀವನದ ಸಾಧನೆ ಮಣ್ಣು ಪಾಲಾಯ್ತು. ಆನೆ ಗಾತ್ರದ ಮೋದಿ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇತ್ತ ಜಗದೀಶ್ ಶೆಟ್ಟರ್ ಬಗ್ಗೆಯೂ ಮಾತನಾಡಿದ ಅವರು, ಶೆಟ್ಟರ್ ಪರಿಸ್ಥಿತಿ ನೋಡಿದರೆ ನನಗೆ ಅಯ್ಯೋ ಪಾಪಾ ಎನಿಸುತ್ತಿದೆ. ಆರ್‌ಎಸ್‌ಎಸ್, ಹಿಂದುತ್ವ ವಿಧಾಸನಭೆಯಲ್ಲಿ ಮಾತನಾಡಿದ್ದ ಶೆಟ್ಟರ್ ಸ್ವಾಭಿಮಾನವನ್ನು ನಾನು ನಿರೀಕ್ಷಿಸುತ್ತಿದ್ದೆ .ಟಿಕೆಟ್‌ಗಾಗಿ ಶೆಟ್ಟರ್ ಸ್ವಾಭಿಮಾನ ಮಾರಿಕೊಳ್ಳುತ್ತಿದ್ದಾರೆ .ಶೆಟ್ಟರ್ ಬಹಿರಂಗವಾಗಿ ಕಾಂಗ್ರೆಸ್ ನಿಲುವನ್ನು ಖಂಡಿಸಲಿಒಂದುವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಭಜರಂಗದಳ ನಿಷೇಧ ಮಾಡಿದ್ರೆ, ಶೆಟ್ಟರ್ ಏನ್ಮಾಡ್ತೀರಿ..? ಎಂದು ಪ್ರಶ್ನೆ ಮಾಡಿದ್ದಾರೆ .