
ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ & ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್.ಆರ್ .ರಮೇಶ್ ದೂರು ನೀಡಿದ್ದಾರೆ. ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ದೇವನಹಳ್ಳಿಯಲ್ಲಿರುವ ಏರೋಸ್ಪೇಸ್ ಪಾರ್ಕ್ ಬಳಿಯ 5 ಎಕರೆ ಭೂಮಿಯನ್ನು ಕೆಐಎಡಿಬಿಯಿಂದ ಸಿಎ ಸೈಟ್ ಹೆಸರಿನಲ್ಲಿ ಮಂಜೂರು ಮಾಡಿರುವ ಆರೋಪದ ಮೇಲೆ ಸಚಿವ ಎಂ ಬಿ ಪಟೀಲ್ & ಖರ್ಗೆ ಕುಟುಂಬದವರು ಸೇರಿದಂತೆ 7 ಜನರ ವಿರುದ್ಧ 394 ಪುಟಗಳ ದಾಖಲೆ ಸಮೇತ ದೂರು ನೀಡಿದ್ದಾರೆ.